More

    ಹೆಚ್ಚುತ್ತಿದೆ ಕೋವಿಡ್ ಸೋಂಕಿತರ ಸಂಖ್ಯೆ, ಸಕ್ರಿಯ ಪ್ರಕರಣಗಳು 50 ಸಾವಿರಕ್ಕೂ ಅಧಿಕ, ಮರಣ ಪ್ರಮಾಣದಲ್ಲೂ ಹೆಚ್ಚಳ!

    ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 6,570 ಕರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಇದರೊಂದಿಗೆ ದಿನದ ಸೋಂಕು ಪ್ರಮಾಣ ದರ ಶೇ. 6.04ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 10.40 ಲಕ್ಷ ಮೀರಿದೆ.

    ಸೋಂಕು ಏರಿಕೆಯೊಂದಿಗೆ ಮರಣ ಪ್ರಮಾಣವೂ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 22 ಮಂದಿ, ಕಲಬುರಗಿ ಮೂವರು, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ತಲಾ ಇಬ್ಬರು, ಬೆಳಗಾವಿ, ಬೀದರ್, ಧಾರವಾಡ, ಕೋಲಾರ, ಮೈಸೂರು, ತುಮಕೂರು ಮತ್ತು ವಿಜಯಪುರದಲ್ಲಿ ತಲಾ ಒಬ್ಬರಂತೆ ಒಟ್ಟು 36 ಮಂದಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 12,767 ತಲುಪಿದೆ.

    ಇದನ್ನೂ ಓದಿ: ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​

    ರಾಜ್ಯದಲ್ಲಿ ಸದ್ಯ 53,395 ಸೋಂಕಿತರಿದ್ದು, ಈ ಪೈಕಿ ಗಂಭೀರ ಸಮಸ್ಯೆಯಿಂದಾಗಿ 357 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ಆಸ್ಪತ್ರೆಗಳು ಹಾಗೂ ಕೋವಿಡ್ ಆರೈಕೆ ಕೇಂದ್ರಗಳು ಮತ್ತು ಲಕ್ಷಣ ರಹಿತ ಸೋಂಕಿತರು ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ದಿನ 2,393 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 9.73 ಲಕ್ಷ ದಾಟಿದೆ.

    ಎಂಟು ಜಿಲ್ಲೆಗಳಲ್ಲಿ ಹೆಚ್ಚಿದ ಸೋಂಕು: ಬೆಂಗಳೂರು ನಗರದಲ್ಲಿ 4,422, ಕಲಬುರಗಿ 240, ಮೈಸೂರು 216, ತುಮಕೂರು 183, ದಕ್ಷಿಣ ಕನ್ನಡ 145, ಉತ್ತರ ಕನ್ನಡ 142, ಬೀದರ್ 129, ಬಳ್ಳಾರಿ 126 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    ಇದನ್ನೂ ಓದಿ: ಇಲ್ಲೆಲ್ಲ ಈ ಲಸಿಕೆ ಕೊಡುವುದು ನಿಲ್ಲಿಸಿದ್ದಾರಂತೆ!; ರಕ್ತಹೆಪ್ಪುಗಟ್ಟುತ್ತದೆ ಎಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ

    ಕರೊನಾ ಎರಡನೇ ಅಲೆ ಯಾವಾಗ ಮುಗಿಯುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ..

    ರಾಜ್ಯದಲ್ಲಿ 5 ದಿನ ಗುಡುಗು ಮಿಂಚು ಸಹಿತ ಮಳೆ, ಹವಾಮಾನ ಇಲಾಖೆ ನೀಡಿದೆ ಮುನ್ಸೂಚನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts