More

    ರಾಜ್ಯದಲ್ಲಿ ಹೆಚ್ಚಾಯಿತು ಕೋವಿಡ್ ಪ್ರಕರಣ; 1,478 ಮಂದಿಯಲ್ಲಿ ಸೋಂಕು ದೃಢ

    ಬೆಂಗಳೂರು: ರಾಜ್ಯದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಲಾರಂಭಿಸಿದೆ. ಬುಧವಾರ 1,478 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,866ಕ್ಕೆ ಏರಿಕೆಯಾಗಿದೆ.

    ಕಳೆದ 24 ಗಂಟೆಗಳಲ್ಲಿ 1,229 ಸೋಂಕಿತರು ಚೇತರಿಸಿಕೊಂಡಿದ್ದು, ಗುಣಮುಖರ ಒಟ್ಟು ಸಂಖ್ಯೆ 39.42 ಲಕ್ಷ ಮೀರಿದೆ. ಈ ವರೆಗೂ 40,089 ಸೋಂಕಿತರು ಸಾವಿಗೀಡಾಗಿದ್ದು, 39.90 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಬಳಲಿದ್ದಾರೆ.

    ಇದನ್ನೂ ಓದಿ: ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿನಿ; ಹಾಸ್ಟೆಲ್​ನಲ್ಲಿ ನೇತಾಡುತ್ತಿತ್ತು ಶವ!

    ಬೆಂಗಳೂರು ನಗರದಲ್ಲಿ 1,251 ಮಂದಿ, ಬೆಂಗಳೂರು ಗ್ರಾಮಾಂತರದಲ್ಲಿ 32, ಮೈಸೂರು 24, ಧಾರವಾಡ 18, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ತಲಾ 15, ಕೋಲಾರ 13, ಬಳ್ಳಾರಿಯಲ್ಲಿ 12, ಉತ್ತರ ಕನ್ನಡದಲ್ಲಿ 10, ತುಮಕೂರಿನಲ್ಲಿ 9, ದಕ್ಷಿಣ ಕನ್ನಡ, ಹಾಸನ, ಕಲಬುರಗಿ ಮತ್ತು ಉಡುಪಿಯಲ್ಲಿ ತಲಾ 8, ಚಾಮರಾಜನಗರ 7, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ವಿಜಯಪುರದಲ್ಲಿ ತಲಾ 6, ಬೀದರ್ 4, ಚಿಕ್ಕಬಳ್ಳಾಪುರ 3, ದಾವಣಗೆರೆ, ಕೊಪ್ಪಳ ಮತ್ತು ರಾಮನಗರ ತಲಾ ಇಬ್ಬರು ಹಾಗೂ ಚಿತ್ರದರ್ಗು, ರಾಯಚೂರು ಮತ್ತು ಯಾದಗಿರಿ ತಲಾ ಒಬ್ಬರಂತೆ 1,478 ಸೋಂಕು ಪ್ರಕರಣಗಳು ವರದಿಯಾಗಿವೆ.

    ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..

    ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts