More

    ಏರ್ಪೋರ್ಟ್​ನಲ್ಲಿ ಮೂರು ಜನರಿಗೆ ಕೋವಿಡ್ ಪಾಸಿಟಿವ್; ದಿನದಿಂದ ದಿನಕ್ಕೆ ಕೇಸ್ ಸಂಖ್ಯೆ ಹಚ್ಚಳ!

    ಬೆಂಗಳೂರು: ರಾಜ್ಯದಲ್ಲಿ ಕರೋನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಸರ್ಕಾರ ನಿರಂತರವಾಗಿ ಹೊಸ ನಿಯಮಗಳನ್ನು ಜಾರಿಗೆ ತಂದು ಜನರಲ್ಲಿ ಅರಿವು ಮೂಡಿಸುತ್ತಿದೆ.

    ಇತ್ತೀಚೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಯಾಣಿಕರಿಗೆ ಹೊಸ ನಿಯಮಗಳನ್ನು ಅನ್ವಯಿಸಲಾಗಿತ್ತು. ಇದೀಗ ಕೋವಿಡ್ ಪಾಸಿಟಿವ್ ಟೆಸ್ಟ್ ವರದಿ ಬರುವವರೆಗೂ ಕಾಯದೇ ಪ್ರಯಾಣಿಕರಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಅವರನ್ನು ತಕ್ಷಣ ಆಸ್ಪತ್ರೆಗೆ ಕಳಿಸಲಾಗುತ್ತಿದೆ.

    ಇದನ್ನೂ ಓದಿ: ಕರೋನಾ ಎಫೆಕ್ಟ್​: ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಹೊಸ ನಿಯಮಗಳು..!

    ಆದರೂ ಕರೋನಾ ಆರ್ಭಟ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಂಗಳೂರು ಏರ್ಪೋರ್ಟ್​ನಲ್ಲಿ ಬಂದಿಳಿಯುತ್ತಿರುವ ವಿದೇಶಿ ಪ್ರಯಾಣಿಕರಲ್ಲಿ ಕರೋನಾ ಪಾಸಿಟಿವ್​ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಆಡಳಿತಕ್ಕೆ ಇದು ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ನಿನ್ನೆ ವಿದೇಶದಿಂದ ಬಂದ ಪ್ರಯಾಣಿಕರ ಪೈಕಿ ೧೦೭ ಜನರನ್ನು ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ ಮೂರು ಜನರಿಗೆ ಕರೋನಾ ಪಾಸಿಟಿವ್​ ಬಂದಿದೆ.

    ದಿನೇ ದಿನೇ ಪಾಸಿಟೀವ್ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಏರ್ಪೋರ್ಟ್​ನಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಕ ಮಾಡಿದೆ. ಒಟ್ಟು ಇಬ್ಬರು ವೈದ್ಯರು, 8 ಜನ ಹೆಲ್ತ್ ಇನ್ಸ್​ಪೆಕ್ಟರ್, ಡಾಟಾ ಆಪರೇಟರ್​ಗಳನ್ನು ನಿಯೋಜನೆ ಮಾಡಲಾಗಿದೆ. ಸದ್ಯ ಮೂರು ಪಾಳಿಗಳಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಏರ್ಪೋರ್ಟ್​ನಲ್ಲಿ ಇನ್ನಷ್ಟು ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts