More

    ಸಮರ್ಥವಾಗಿ ಕೋವಿಡ್ ನಿಯಂತ್ರಿಸಿದ ಮೋದಿ

    ಹಿರೇಕೆರೂರ: ಜಗತ್ತಿನಲ್ಲಿ ಮುಂದುವರಿದ ಶ್ರೀಮಂತ ರಾಷ್ಟ್ರಗಳು ಕರೊನಾ ನಿಯಂತ್ರಣದಲ್ಲಿ ಎಡವಿದವು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದಲ್ಲಿ ಸಮರ್ಥವಾಗಿ ಕೋವಿಡ್ ನಿಯಂತ್ರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ಹೇಳಿದರು.

    ಪಟ್ಟಣದ ಗುರುಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಿರೇಕೆರೂರ ವಿಧಾನಸಭೆ ಕ್ಷೇತ್ರದಲ್ಲಿ ಕರೊನಾದಿಂದ ಮೃತಪಟ್ಟ ಬಡ ಕುಟುಂಬಗಳ ಅವಲಂಬಿತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ಹಾಗೂ ಕೆಲವರಿಗೆ ವಿಧವಾ ವೇತನ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

    ಕರೊನಾ ಸೋಂಕಿನಿಂದ ಮೃತಪಟ್ಟ ಬಡ ಕುಟುಂಬದ ಅವಲಂಬಿತರಿಗೆ ತಲಾ 50 ಸಾವಿರ ರೂ. ನೀಡುತ್ತಿರುವ ಕೃಷಿ ಸಚಿವ ಬಿ.ಸಿ. ಪಾಟೀಲ ಅವರ ಕೆಲಸ ಶ್ಲಾಘನೀಯ. ಸರ್ಕಾರ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೆಂಟಿಲೇಟರ್ ಅಳವಡಿಕೆ, ಪಿಪಿಇ ಕಿಟ್, ಸೂಕ್ತ ಔಷಧ ಪೂರೈಸಿದೆ ಎಂದರು.

    ಕೋವಿಡ್​ನಿಂದಾಗಿ ಪಾಲಕರನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 10 ಲಕ್ಷ ರೂ. ಠೇವಣಿ ಇಟ್ಟಿದ್ದಾರೆ. ಇದುವರೆಗೆ ರಾಜ್ಯದಲ್ಲಿ 1.68 ಕೋಟಿ ಜನರಿಗೆ ಆಹಾರ ಸಾಮಗ್ರಿ ಒದಗಿಸಲಾಗಿದೆ. 68 ಲಕ್ಷ ಆಹಾರ ಕಿಟ್ ವಿತರಿಸಲಾಗಿದೆ ಎಂದರು.

    ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಕರೊನಾ ಸೋಂಕಿನಿಂದ ಮೃತಪಟ್ಟ ಬಡ ಕುಟುಂಬಸ್ಥರಿಗೆ ಧೈರ್ಯ, ಸಾಂತ್ವನ ಹೇಳಬೇಕಿರುವುದು ನನ್ನ ಕರ್ತವ್ಯ. ಕ್ಷೇತ್ರದಲ್ಲಿ ಈವರೆಗೆ 104 ಕುಟುಂಬಗಳಿಗೆ ತಲಾ 50 ಸಾವಿರ ರೂ. ನಂತೆ 52 ಲಕ್ಷ ರೂ. ವೈಯುಕ್ತಿಕವಾಗಿ ವಿತರಿಸಿದ್ದೇನೆ. ಹಣವನ್ನು ಮಕ್ಕಳ ಶಿಕ್ಷಣಕ್ಕೆ ಬಳಸಬೇಕು ಎಂದು ಸಲಹೆ ನೀಡಿದರು.

    ಕರೊನಾ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಮನೆಗೆಳಿಗೆ ತೆರಳಿ ಮಕ್ಕಳ ಆರೋಗ್ಯ ತಪಾಸಣೆ, ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ 5 ಬೃಹತ್ ನೀರಾವರಿ ಯೋಜನೆ ಮೂಲಕ ತಾಲೂಕಿನ ಶೇ. 98ರಷ್ಟು ಕೆರೆಗಳನ್ನು ತುಂಬಿಸುವ ಯೋಜನೆ ಲೋಕಾರ್ಪಣೆ ಮಾಡಲಾಗುವುದು ಎಂದರು.

    ಸಾಣೇಹಳ್ಳಿಯ ಪಂಡಿತಾರಾಧ್ಯ ಸಾಮೀಜಿ ಸಾನ್ನಿಧ್ಯ ವಹಿಸಿದ್ದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ರಾಜನಹಳ್ಳಿಯ ವಾಲ್ಮೀಕಿ ಗುರುಪಿಠದ ಪೀಠಾಧೀಶ ಪ್ರಸನ್ನನಾಂದ ಪುರಿ ಸ್ವಾಮೀಜಿ, ಕಾಗಿನೆಲೆ ಕನಕ ಗುರು ಪೀಠದ ನಿರಂಜನನಾಂದ ಪುರಿ ಸ್ವಾಮೀಜಿ ಮಾತನಾಡಿದರು.

    ಕರೊನಾದಿಂದ ಮೃತಪಟ್ಟ 53 ಕುಟುಂಬಸ್ಥರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ ತಲಾ 50 ಸಾವಿರ ನಗದು, 38 ಮಹಿಳೆಯರಿಗೆ ವಿಧವಾ ವೇತನ ಆದೇಶ ಪತ್ರ, 108 ಜನರಿಗೆ ಶವ ಸಂಸ್ಕಾರದ ಪರಿಹಾರ ಚೆಕ್, 38 ತಾಯಂದಿರಿಗೆ ರಾಷ್ಟ್ರೀಯ ಕುಟುಂಬ ಕಲ್ಯಾಣ ಯೋಜನೆ ಮಂಜೂರಾತಿ ಆದೇಶ ಪತ್ರ ವಿತರಿಸಲಾಯಿತು.

    ನಂತರ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ತನ್ನ ಹೆಸರು ಸೇರ್ಪಡೆ ಮಾಡಿಕೊಂಡ ರಟ್ಟಿಹಳ್ಳಿ ತಾಲೂಕಿನ ಗುಂಡಗಟ್ಟಿ ಗ್ರಾಮದ 8 ವರ್ಷದ ಬಾಲಕಿ ನಮೃತಾ ಗುಡದಳ್ಳಿಯನ್ನು ಸನ್ಮಾನಿಸಲಾಯಿತು.

    ಪಪಂ ಉಪಾಧ್ಯಕ್ಷೆ ಸುಧಾ ಚಿಂದಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ತಾಲೂಕು ಘಟಕದ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ, ಜಿ. ಶಿವನಗೌಡ್ರ, ಡಿ.ಸಿ. ಪಾಟೀಲ, ತಹಸೀಲ್ದಾರರಾದ ಉಮಾ.ಕೆ.ಎ., ಅರುಣಕುಮಾರ ಕಾರಗಿ, ಪಪಂ ಸದಸ್ಯರು, ಪಕ್ಷದ ಮುಖಂಡರು ಇದ್ದರು. ಆರ್.ಎನ್. ಗಂಗೋಳ, ಮಂಜುನಾಥ ಚಲವಾದಿ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts