More

    ಕೋವಿಡ್ ಮಾರ್ಗಸೂಚಿ ಪಾಲಿಸಿ ಡಿಸಿ ಸೂಚನೆ

    ಗದಗ: ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೋವಿಡ್​- 19 ಎರಡನೇ ಅಲೆ ಭೀತಿಯನ್ನು ಸೃಷ್ಟಿಸುತ್ತಿದ್ದು, ಇದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೖಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶಬಾಬು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಸಾರ್ವಜನಿಕರು ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಲಸಿಕೆ ಪಡೆದುಕೊಳ್ಳುವುದು ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ವಿವಿಧ ಸಮಾರಂಭಗಳು ಹಾಗೂ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಸಾದ್ಯತೆ ಹೆಚ್ಚಾಗಿರುತ್ತದೆ. ಈ ಕುರಿತು ಜನರಿಗೆ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದ್ದಾರೆ. ಸಾಮಾಜಿಕ ಆಚರಣೆಗಳು, ಸಮಾರಂಭಗಳು ಜರುಗುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮದುವೆಗೆ ತೆರೆದ ಪ್ರದೇಶಗಳಲ್ಲಿ 500 ಜನರು ಹಾಗೂ ಸಭಾಂಗಣ, ಹಾಲ್​ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 200 ಜನರು ಮೀರದಂತೆ ಪ್ರವೇಶಕ್ಕೆ ಅವಕಾಶವಿದೆ. ಜನ್ಮದಿನ ಹಾಗೂ ಇತರ ಆಚರಣೆಗಳಲ್ಲಿ ತೆರೆದ ಪ್ರದೇಶಗಳಲ್ಲಿ 100 ಜನರಿಗೆ, ಸಭಾಂಗಣದಲ್ಲಿ 50 ಜನರು ಮೀರದಂತೆ ಅವಕಾಶವಿದೆ. ನಿಧನ, ಶವಸಂಸ್ಕಾರಗಳಿಗೆ ತೆರೆದ ಪ್ರದೇಶಗಳಲ್ಲಿ 100 ಜನ, ಸಭಾಂಗಣಗಳಲ್ಲಿ 50 ಜನರಿಗೆ ಅವಕಾಶವಿದೆ. ಕೋವಿಡ್​ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ವಿಧಿಸಿದ ಅಗತ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts