More

    ಕೋವಿಡ್ ಸೋಂಕು ಹೆಚ್ಚಳ: ಮುಂಬರುವ ಹಬ್ಬಗಳಲ್ಲಿ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಸುತ್ತೋಲೆ

    ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಆಚರಿಸುವ ವಿವಿಧ ಹಬ್ಬಗಳಲ್ಲಿ ಕಡ್ಡಾಯವಾಗಿ ಮುಂಜಾಗ್ರತಾ ಕ್ರಮವನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಿದೆ.

    ಸದ್ಯ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮ ಜಾರಿಯಲ್ಲಿದೆ. ಆದರೂ, ಜೂನ್ ಆರಂಭದಿಂದ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೌರಿ ಗಣೇಶ ಹಬ್ಬ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮವಾಸ್ಯೆಯಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

    ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ ಅಂತ್ಯದವರೆಗೂ ಸಾರ್ವಜನಿಕ ಸ್ಥಳಗಳು, ಹೋಟೆಲ್, ಬಾರ್ ರೆಸ್ಟೋರೆಂಟ್‌ಗಳು, ಕಚೇರಿಗಳು, ಪ್ರಯಾಣ ಸಂದರ್ಭದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಜತೆಗೆ ಗುಂಪು ಸೇರುವುದನ್ನು ನಿರ್ಬಂಧಿಸುವಂತೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

    ಈ ಬಾರಿಯ ಗಣೇಶ ಹಬ್ಬದ ಸಂದರ್ಭದಲ್ಲಿ ಉತ್ಸವ, ಮೂರ್ತಿ ಪ್ರತಿಷ್ಠಾಪನೆಯನ್ನು ಹೊರಾಂಗಣ ಪ್ರದೇಶದಲ್ಲಿ ಆಯೋಜಿಸಲು ಪ್ರೋತ್ಸಾಹಿಸಬೇಕು. ಸ್ಥಳದಲ್ಲಿ ಥರ್ಮಲ್ ಸ್ಕ್ರಿನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಒಂದು ಮೀಟರ್ ಅಂತರ, ಮಾಸ್ಕ್ ಧರಿಸುವುದಕ್ಕೆ ಸೂಚಿಸಬೇಕು. ಸೋಂಕು ಲಕ್ಷಣ ಉಳ್ಳವರು ಉತ್ಸವಗಳಿಂದ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವಂತೆ ಸ್ಥಳೀಯ ಮಟ್ಟದಲ್ಲಿ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

    ತಿಂಡಿ ವಿಷಯಕ್ಕೆ ಜಗಳ: ಹೆತ್ತ ತಾಯಿ, ಪತ್ನಿ ಹಾಗೂ ಮೂವರು ಮಕ್ಕಳ ಹತ್ಯೆಗೈದ ಪಾಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts