More

    ಕೋವಿಡ್ ಎದುರಿಸಲು ಮಂಗಳವಾರ ಮಾರ್ಗಸೂಚಿ ಹೊರಬೀಳುವ ಸಾಧ್ಯತೆ?

    * ತಾಂತ್ರಿಕ ಸಲಹಾ ಸಮಿತಿ ತಜ್ಞರ ಶಿಫಾರಸು ಆಧರಿಸಿ ನಿಯಮ ಜಾರಿ
    * ಕ್ರಿಸ್ ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ

    ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ರೂಪಾಂತರ ತಳಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡದಂತೆ ತಡೆಯಲು ಆರೋಗ್ಯ ಇಲಾಖೆ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ಮಂಗಳವಾರ ಕೋವಿಡ್ ಮಾರ್ಗಸೂಚಿ ಹೊರಬೀಳುವ ಸಾಧ್ಯತೆ ಇದೆ.

    ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ವರದಿ ಹಿನ್ನೆಲೆಯಲ್ಲಿ ಸೋಂಕು ಪತ್ತೆ ಹಾಗೂ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆ, ಔಷಧ ಪೂರೈಕೆ ಸೇರಿ ಅಗತ್ಯ ವೈದ್ಯಕೀಯ ಪರಿಕರಗಳ ಖರೀದಿ ಪ್ರಕ್ರಿಯೆಗೆ ಸಿದ್ಧತೆ ನಡೆದಿದೆ. ಇನ್ನು ಎಚ್ಚರಿಕೆ ಕ್ರಮಗಳ ಕುರಿತು ಆರೋಗ್ಯ ಇಲಾಖೆ ಈಗಾಗಲೇ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಎರಡು ಸುತ್ತಿನ ಸಭೆ ನಡೆಸಿದೆ. ಸಮಿತಿ ನೀಡಿರುವ ಶಿಾರಸು ಆಧರಿಸಿ ಮಂಗಳವಾರ ಸಾರ್ವಜನಿಕ ನಿಯಮ ಪಾಲನೆ ಕುರಿತು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಹೊರ ರೂಪಾಂತರ ತಳಿ ಜೆಎನ್-1 ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಸಮಿತಿಗೆ ಸೂಚನೆ ನೀಡಲಾಗಿದೆ. ಶಂಕಿತರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿ ಸೋಂಕು ವರದಿಯಲ್ಲಿ ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಲು ಸೂಚಿಸಲಾಗಿದೆ ಎಂದರು.

    ಹೊಸ ವರ್ಷಕ್ಕೆ ಪ್ರತ್ಯೇಕ ಮಾರ್ಗಸೂಚಿ: ಕ್ರಿಸ್ ಮಸ್ ಹಬ್ಬ ಹಾಗೂ ಹೊಸ ವರ್ಷ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಒಂದು ವಾರಗಳ ಪ್ರಕರಣಗಳನ್ನು ಆಧರಿಸಿ ಹಬ್ಬದ ಹಾಗೂ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts