More

    ಶಾಸಕ ರಘುಪತಿ ಭಟ್‌ಗೆ ಕೋವಿಡ್ ಪಾಸಿಟಿವ್

    ಉಡುಪಿ: ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಭಾನುವಾರ ಕರೊನಾ ಸೋಂಕು ದೃಢಪಟ್ಟಿದೆ. ಶನಿವಾರ ಸ್ವಲ್ಪ ಕೆಮ್ಮು ಕಾಣಿಸಿಕೊಂಡ ಕಾರಣ ಪರೀಕ್ಷೆಗೆ ಒಳಗಾಗಿದ್ದ ಶಾಸಕರಿಗೆ ಭಾನುವಾರ ಮಧ್ಯಾಹ್ನ ಕರೊನಾ ಪಾಸಿಟಿವ್ ಬಂದಿದೆ.

    ಹೀಗಾಗಿ ವೈದ್ಯರ ಸಲಹೆಯಂತೆ ಚಿಕಿತ್ಸೆಗಾಗಿ ಕೆಎಂಸಿಗೆ ದಾಖಲಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, 4 ದಿನದಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ಗೆ ಒಳಗಾಗಿ ಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts