More

    ಕೋವಿಡ್ ಮುಂಜಾಗ್ರತೆ ವಹಿಸಲು ಸೂಚನೆ

    ಧಾರವಾಡ: ತಮಿಳುನಾಡು, ಕೇರಳದಲ್ಲಿ ಕೋವಿಡ್ ಹೊಸ ತಳಿಯ ರೋಗಾಣು ಪತ್ತೆಯಾಗಿರುವ ವರದಿಯಾಗಿದ್ದು, ಜಿಲ್ಲೆಯಲ್ಲಿ ಪ್ರಕರಣ ವರದಿಯಾಗಿಲ್ಲ. ಸಾರ್ವಜನಿಕರು ಭಯ ಪಡದೆ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

    ಪ್ರಕಟಣೆ ನೀಡಿರುವ ಅವರು, 60 ವರ್ಷ ಮೇಲ್ಪಟ್ಟವರು ವಿಶೇಷವಾಗಿ ಕಿಡ್ನಿ, ಹೃದಯ, ಲೀವರ್ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಜನದಟ್ಟಣೆ, ಹೊರಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳು ಕಾಣಿಸಿದರೆ ವೆದ್ಯಕೀಯ ಸಲಹೆ ಪಡೆಯಬೇಕು. ಆರೋಗ್ಯ ಸಮಸ್ಯೆ ಇದ್ದರೆ ಮನೆಯಲ್ಲಿರುವುದು ಸೂಕ್ತ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ಧಾರವಾಡ ಜಿಲ್ಲಾ ಆಸ್ಪತ್ರೆ ಮತ್ತು ಕಲಘಟಗಿ, ನವಲಗುಂದ, ಕುಂದಗೋಳ ತಾಲೂಕು ಆಸ್ಪತ್ರೆಗಳಲ್ಲಿ ಸಂಭವನೀಯ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts