More

    ಅನುದಾನಕ್ಕೆ ಕೋವಿಡ್ ಅಡ್ಡಿ

    ಕಡಬ: ಕುಮಾರಧಾರಾ ಹೊಳೆಗೆ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಿಜಕಳದ ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಿಸಲು 23 ಕೋಟಿ ರೂ. ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದರೂ ಇನ್ನೂ ಅನುದಾನ ಬಿಡುಗಡೆಯಾಗಿಲ್ಲ. ಈ ನಡುವೆ ಕಾಮಗಾರಿ ಹೊಣೆಯನ್ನು ಸರ್ಕಾರ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ(ಕೆಆರ್‌ಡಿಸಿಎಲ್)ಕ್ಕೆ ವಹಿಸಿದೆ.

    ಸ್ಥಳೀಯರ ನಿರಂತರ ಒತ್ತಡದ ಪರಿಣಾಮ 2 ವರ್ಷಗಳ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೇತುವೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ಸಲ್ಲಿಸಿದ್ದರು. ಆದರೆ ಅನುದಾನದ ಕೊರತೆ ಕಾರಣದಿಂದಾಗಿ ಆ ಪ್ರಸ್ತಾವನೆ ತಿರಸ್ಕೃತವಾಗಿತ್ತು. ಆ ಬಳಿಕ ಕೆಆರ್‌ಡಿಸಿಎಲ್ ಮೂಲಕ ಸೇತುವೆ ನಿರ್ಮಾಣಕ್ಕೆ ಅಗತ್ಯ ಪ್ರಾಥಮಿಕ ಪ್ರಕ್ರಿಯೆಗಳನ್ನು ನಡೆಸಲಾಗಿದೆ.

    ಶಾಸಕರಾಗಿದ್ದ ಎಸ್.ಅಂಗಾರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿದ್ದ ಕಡಬ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಮುಂದಾಳತ್ವದ ನಿಯೋಗ ಪಾಲೋಳಿ ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿ ಒತ್ತಡ ಹೇರಿತ್ತು. ಬಳಿಕ ಸಚಿವರು ಪಾಲೋಳಿ ಸೇತುವೆಯೂ ಸೇರಿದಂತೆ ಸುಳ್ಯ ವಿಧಾನಸಭಾ ಕ್ಷೇತ್ರದ ಒಟ್ಟು 5 ಸೇತುವೆಗಳ ನಿರ್ಮಾಣಕ್ಕೆ ಅನುದಾನ ಪ್ರಕಟಿಸಿದ್ದರು.

    ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ವ್ಯಾಪ್ತಿಗೆ ಎಡಮಂಗಲ, ಎಣ್ಮೂರು, ದೋಳ್ಪಾಡಿ, ಚಾರ್ವಾಕ ಹಾಗೂ ಕಾಣಿಯೂರು ಗ್ರಾಮಗಳು ಸೇರ್ಪಡೆಯಾಗಿದ್ದು, ತಾಲೂಕು ಕೇಂದ್ರ ಕಡಬವನ್ನು ತಲುಪಲು ಪಾಲೋಳಿ ಮಾರ್ಗ ಅತ್ಯಂತ ಹತ್ತಿರದ ದಾರಿಯಾಗಿದೆ. ಇಲ್ಲಿ ಕುಮಾರಧಾರಾ ನದಿಗೆ ಶಾಶ್ವತ ಸೇತುವೆ ನಿರ್ಮಿಸುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ನಡೆಸಲಾಗುತ್ತಿದೆ. ಅಂಗಾರ ಈ ಬಾರಿ ಸಚಿವರಾದ ಕಾರಣ ಭರವಸೆ ಹೆಚ್ಚಿದೆ ಎನ್ನುತ್ತಾರೆ ಸ್ಥಳೀಯರು.

    ಕೆಲವು ವರ್ಷಗಳಿಂದ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ಇಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡುತ್ತಿದ್ದಾರೆ. 6 ವರ್ಷಗಳ ಹಿಂದೆ ದಾನಿಗಳ ನೆರವಿನಿಂದ ಎಡಮಂಗಲ ಹಾಗೂ ಪಿಜಕಳ ಪರಿಸರದ ಜನರ ಶ್ರಮದಾನದ ಫಲವಾಗಿ 120 ಮೀ. ಉದ್ದದ 10 ಮೀ. ಆಗಲದ ಸೇತುವೆ ನಿರ್ಮಿಸಲಾಗಿತ್ತು. ಆದರೆ ಮಳೆಗಾಲದಲ್ಲಿ ನೀರಿನ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗುವ ಸೇತುವೆಯನ್ನು ಪ್ರತೀ ಬೇಸಿಗೆಯಲ್ಲಿ ಊರವರು ಪುನರ್ ನಿರ್ಮಾಣ ಮಾಡಿ ಉಪಯೋಗಿಸುತ್ತಿದ್ದರು. ಆದರೆ ಈ ಬಾರಿ ಮಾತ್ರ ಸೇತುವೆಯ ಪುನರ್ ನಿರ್ಮಾಣಕ್ಕೆ ಸ್ಥಳೀಯರು ಮುಂದಾಗಿಲ್ಲ.

    ಕೋವಿಡ್ ಕಾರಣದಿಂದಾಗಿ ಸರ್ಕಾರ ಮಟ್ಟದಲ್ಲಿ ಸೇತುವೆಗೆ ಅನುದಾನ ಬಿಡುಗಡೆಗೆ ತಡೆಯಾಗಿದೆ. ಶೀಘ್ರ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
    -ಎಸ್.ಅಂಗಾರ, ಸಚಿವರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts