More

    ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಗಡಿಯಲ್ಲಿ ಹದ್ದಿನ ಕಣ್ಣು

    ಮಂಗಳೂರು: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ, ಜಿಲ್ಲೆಯ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಕ್ರಮ ಜಾರಿಗೊಳಿಸಿ ಸಾರ್ವಜನಿಕರು ವಿರಳವಾಗಿ ಸಂಚರಿಸುವ ರಸ್ತೆಗಳನ್ನು ಹೊರತುಪಡಿಸಿ, ಉಳಿದ ಎಲ್ಲ ಅನವಶ್ಯಕ ರಸ್ತೆ ಮುಚ್ಚುವಂತೆ ಹಾಗೂ ಅವರು ತಾಲೂಕುವಾರು ಚೆಕ್ ಪೋಸ್ಟ್ಗಳೊಂದಿಗೆ ಹೆಚ್ಚುವರಿ ಚೆಕ್‌ಪೋಸ್ಟ್ ತೆರೆಯುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚಿಸಿದರು.

    ಹೊರ ರಾಜ್ಯದಿಂದ ಆಗಮಿಸುವವರಿಗೆ ವಿಶೇಷ ಸರ್ವೇಕ್ಷಣಾ ಕ್ರಮ ಕೈಗೊಳ್ಳುವ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಮಾಹಿತಿ ನೀಡಿದರು. ಕೇರಳದಿಂದ ಜಿಲ್ಲೆಗೆ ಬರುವವರು 72 ಗಂಟೆಯೊಳಗೆ ನಡೆಸಲಾದ ಆರ್‌ಟಿ-ಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಹೊಂದಿರಬೇಕು. ಆರ್‌ಎಟಿ ವರದಿಗೆ ಅವಕಾಶವಿಲ್ಲ. ಸಾರ್ವಜನಿಕರು ಆರೋಗ್ಯದ ಸ್ವಯಂ ಮೇಲ್ವಿಚಾರಣೆ ನಡೆಸಿ, ಜ್ವರ, ಶೀತ, ಕೆಮ್ಮು, ಗಂಟಲು ನೋವು, ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ವೈದ್ಯಕೀಯ ನೆರವು ಪಡೆಯಲು ಹಾಗೂ ಕೋವಿಡ್ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು.

    ಟಾಸ್ಕ್ ಫೋರ್ಸ್ ರಚನೆ: ಗ್ರಾಪಂ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆಗೊಂಡಿದ್ದು, ತಾಲೂಕು ಮಟ್ಟದಲ್ಲೂ ವಾರ್ಡ್ ಮಟ್ಟದ ಟಾಸ್ಕ್ ಫೋರ್ಸ್ ರಚನೆಯಾಗುವುದರೊಂದಿಗೆ ಎಲ್ಲಿ ಐಎಲ್‌ಐ ಮತ್ತು ಎಸ್‌ಎಎಆರ್‌ಐ ಪ್ರಕರಣಗಳು ಇವೆ ಎಂಬ ಮಾಹಿತಿ ಪಡೆಯಬೇಕು. ವ್ಯಾಕ್ಸಿನೇಶನ್ ಬಗ್ಗೆಯೂ ತಾಲೂಕು ಆರೋಗ್ಯ ಅಧಿಕಾರಿಗಳು, ತಹಸೀಲ್ದಾರ್ ಸೇರಿಂತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕರಿಗೆ ಮಾಹಿತಿ ಹಾಗೂ ಅರಿವು ಕಾರ್ಯಕ್ರಮ ನಡೆಸಬೇಕು. ಗ್ರಾಪಂ ಟಾಸ್ಕ್ ಫೋರ್ಸ್ ಶನಿವಾರ ಸಭೆ ನಡೆಸಿ ಕೋವಿಡ್ 2ನೇ ಅಲೆ ಉಂಟಾಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಮಾರ್ಗಸೂಚಿಗಳನ್ನು ಚರ್ಚಿಸಬೇಕು. ಸಾರ್ವಜನಿಕರಿಗೆ ವ್ಯಾಕ್ಸಿನೇಶನ್ ತೆಗೆದುಕೊಳ್ಳಲು ಉತ್ತೇಜನ ನೀಡಬೇಕು ಎಂದರು.

    ಎಲ್ಲರ ವರದಿ ಪರಿಶೀಲನೆ: ಕೇರಳದಲ್ಲಿ ಕರೊನಾ ಪ್ರಕರಣ ಹೆಚ್ಚಾಗಿರುವುದರಿಂದ ಜಿಲ್ಲೆಗೆ ಹೊಂದಿಕೊಂಡಿರುವ ಚೆಕ್‌ಪೋಸ್ಟ್ಗಳಲ್ಲಿ ಹಾಗೂ ಹೊಸ ಚೆಕ್‌ಪೋಸ್ಟ್ ನಿರ್ಮಾಣ ಮಾಡಿ ಪ್ರತಿಯೊಬ್ಬರ ಕೋವಿಡ್-19 ವರದಿ ಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ತಿಳಿಸಿದರು. ಸಭೆ ಸಮಾರಂಭಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನ ಸೇರದಂತೆ ಕಂದಾಯ ಇಲಾಖೆ, ಸ್ಥಳೀಯ ಸಂಸ್ಥೆ ಅಧಿಕಾರಿಗಳು ಹಾಗೂ ಗ್ರಾಪಂ ಅಧಿಕಾರಿಗಳು ನಿಗಾವಹಿಸಬೇಕು. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ದಂಡ ವಿಧಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts