More

    ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ

    ಧಾರವಾಡ: ಕೇರಳ, ತಮಿಳುನಾಡಿನಲ್ಲಿ ಕೋವಿಡ್ ಹೊಸ ಉಪ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾಡಳಿತಗಳು ಚಿಕಿತ್ಸಾ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರ ನಿರ್ದೇಶಿಸಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದರೆ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸನ್ನದ್ಧವಾಗುವಂತೆ ಸೂಚಿಸಲಾಗಿದೆ. ಡಿ. 3 ಮತ್ತು 4ನೇ ವಾರದೊಳಗೆ ಅಣಕು ಪ್ರದರ್ಶನವನ್ನು ಪೂರ್ಣಗೊಳಿಸಲು ಸೂಚಿಸಲಾಗಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

    ಕೋವಿಡ್ ಹೊಸ ತಳಿಯ ಅವಾಂತರ ಉಲ್ಬಣಗೊಂಡರೆ ಅಗತ್ಯ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್‌ಗಳನ್ನು ಕಾಯ್ದಿರಿಸಲು ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಯಲ್ಲಿ 121 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ.

    ಜೊತೆಗೆ 23 ಐಡಿಯು ಬೆಡ್‌ಗಳು, ಸುಮಾರು 20 ಸಾಮಾನ್ಯ ಬೆಡ್‌ಗಳನ್ನು ಮೀಸಲಿಡಲಾಗಿದೆ. 6 ಕೆಎಲ್‌ನ (ಕಿಲೋಲೀಟರ್) ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ಸುಸ್ಥಿತಿಯಲ್ಲಿದ್ದು, ಕಾರ್ಯನಿರ್ವಹಿಸುತ್ತಿದೆ. 13 ಕೆಎಲ್ ಆಕ್ಸಿಜನ್ ಪ್ಲಾಂಟ್ ಕೂಡ ಇದ್ದು, ಅಗತ್ಯ ಬಿದ್ದರೆ ಬಳಕೆಗೆ ಸಿದ್ಧಪಡಿಸಲಾಗುತ್ತದೆ. 130 ಜಂಬೋ ಸಿಲಿಂಡರ್‌ಗಳಿದ್ದು, ಅಗತ್ಯಕ್ಕೆ ತಕ್ಕಂತೆ ಬಳಕೆಗೆ ಸಿದ್ಧಗೊಳಿಸಲಾಗುವುದು.

    ಜಿಲ್ಲಾ ಆರೋಗ್ಯಾಧಿಕಾರಿಗಳನ್ನೊಳಗೊಂಡು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಮುಂಬರುವ ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸಲು ಜಿಲ್ಲಾ ಆಸ್ಪತ್ರೆ ಸಿದ್ಧ ಎಂದು ಜಿಲ್ಲಾ ಸರ್ಜನ್ ಡಾ. ಸಂಗಪ್ಪ ಗಾಬಿ ‘ವಿಜಯವಾಣಿ’ಗೆ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts