ಉಡುಪಿ: ಜಿಲ್ಲೆಯಲ್ಲಿ ಜೂನ್ 28ರಂದು 6000 ಡೋಸ್ ಕೋವಿಡ್ ಲಸಿಕೆಯನ್ನು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಡಲಾಗುವುದು. ತೆಂಕನಿಡಿಯೂರು ಕಾಲೇಜಿನಲ್ಲಿ 700 ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ 500, ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿನಲ್ಲಿ 250, ಮಣಿಪಾಲ ಮಾಧವ ಪೈ ಕಾಲೇಜಿನಲ್ಲಿ 150, ಸರ್ಕಾರಿ ಪದವಿ ಕಾಲೇಜಿನಲ್ಲಿ 200, ಸರ್ಕಾರಿ ಪದವಿ ಕಾಲೇಜು ಮುನಿಯಾಲ್ 130, ಕುಂದಾಪುರ ಭಂಡಾರ್‌ಕಾರ್ ಕಾಲೇಜಿನಲ್ಲಿ 500 , ಬಿ.ಬಿ, ಹೆಗ್ಡೆ ಕಾಲೇಜಿನಲ್ಲಿ 200, ಗಂಗೊಳ್ಳಿ ತೌಹೀದ್ ಕಾಲೇಜಿನಲ್ಲಿ 50, ಕೋಟೇಶ್ವರ ಕಲವರ ವರದರಾಜ್ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 200, ಮರವಂತೆ ಆರ್‌ಎಎಂಸಿ ಕಾಲೇಜಿನಲ್ಲಿ 200 , ಶಂಕರ್ ನಾರಾಯಣ ಪದವಿ ಕಾಲೇಜು 300, ಬೈಂದೂರು ಕಾಲೇಜಿನಲ್ಲಿ 300, ಬಸ್ರೂರು ಶಾರದ ಕಾಲೇಜಿನಲ್ಲಿ 200, ಕಾರ್ಕಳ ಭುವನೇಂದ್ರ ಕಾಲೇಜು 100 ಕೋವಿಶೀಲ್ಡ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
33,934 ಮಂದಿಗೆ ಲಸಿಕೆ: ಜಿಲ್ಲೆಯ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜು, ಡಿಪ್ಲೊಮಾ, ಐಟಿಐ ಕಾಲೇಜುಗಳ ವಿದ್ಯಾರ್ಥಿ, ಬೋಧಕರು, ಬೋಧಕೇತರ ಸಿಬ್ಬಂದಿ ಸೇರಿದಂತೆ ಒಟ್ಟು 33,934 ಮಂದಿಗೆ ಲಸಿಕೆ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 9777, ಖಾಸಗಿ ಅನುದಾನಿತ, ಅನುದಾನ ರಹಿತ ಕಾಲೇಜು 12764, ಸರ್ಕಾರಿ ಪಾಲಿಟೆಕ್ನಿಕ್‌ನ 2349, ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯ 1117, ಬಂಟಕಲ್ಲು ಶ್ರೀಮಧ್ವವಾದಿರಾಜ ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ 980, ನಿಟ್ಟೆ ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ 4260, ಮೂಡಲಕಟ್ಟೆ ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ 150 ವಿದ್ಯಾರ್ಥಿಗಳಿಗೆ ಮತ್ತು ಈ ಶಿಕ್ಷಣ ಸಂಸ್ಥೆಗಳ 1911 ಬೋಧಕ ಸಿಬ್ಬಂದಿ, 626 ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಜೂನ್ 28ರಂದು 6 ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆ

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan
Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…
ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food
Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…
ನೀವು ಚಿಕನ್ ಅಥವಾ ಮಟನ್ ಲಿವರ್ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver
Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…