

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಇಬ್ಬರು ಮಹಿಳೆಯರು ಸೇರಿದಂತೆ 17 ಹೊಸ ಕರೊನಾ ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿದ್ದು, ಈ ಪೈಕಿ 75 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ.
ಕರೊನಾ ವೈರಸ್‌ಗೆ ರಾಜ್ಯದಲ್ಲಿ ಇದುವರೆಗೆ 11 ಮಂದಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಒಂದೇ ದಿನಕ್ಕೆ 8 ಸೋಂಕಿತರು ಪತ್ತೆಯಾಗಿದ್ದಾರೆ. ಇದನ್ನು ಹೊರತುಪಡಿಸಿದರೆ ಮೈಸೂರಿನಲ್ಲಿ ಇಬ್ಬರು,, ಬೆಂಗಳೂರು ನಗರ ಮತ್ತು ವಿಜಯಪುರದಲ್ಲಿ ತಲಾ ಇಬ್ಬರು, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಬಾಗಲಕೋಟೆ, ಕಲಬುರಗಿಯಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.