

ಕಲಬುರಗಿ: ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ ಅವರ ಪುತ್ರ, ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯ್ ಸಿಂಗ್ಗೆ ಕೋವಿಡ್ ಸೋಂಕು ತಗುಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಜಯ್ ಸಿಂಗ್, 'ಕೋವಿಡ್ ತಪಾಸಣೆ ಮಾಡಿಸಿಕೊಂಡ ಬಳಿಕ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಎರಡು ವಾರ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ನನ್ನೊಂದಿಗೆ ಪ್ರಥಮ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕೆ ಕಾಯ್ದುಕೊಳ್ಳಿ' ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿರಿ ಬೆಂಗಳೂರಿನ ರಾಜಕಾಲುವೆಯಲ್ಲಿ ಕೊಚ್ಚಿಹೋದ 6 ವರ್ಷದ ಬಾಲಕಿ
ಗುರುವಾರವಷ್ಟೇ ಕಲಬುರಗಿ ಜಿಲ್ಲೆಯ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮತ್ತು ಅವರ ಪತ್ನಿ ಹಾಗೂ ಮಗನಿಗೆ ಕರೊನಾ ಸೋಂಕು ಇರುವುದು ಖಚಿತಪಟ್ಟಿತ್ತು.
ಎಲ್ಲ ವಲಯದಲ್ಲೂ ಕಾಲಿಟ್ಟಿರುವ ಕರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ದಂಪತಿ, ಕುಣಿಗಲ್ ಶಾಸಕ ಡಾ. ರಂಗನಾಥ್, ಎಂಎಲ್ಸಿ ಪುಟ್ಟಣ್ಣ ಸೇರಿದಂತೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ, ವಿಕಾಸಸೌಧ, ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ಬಿಎಸ್ವೈ ನಿವಾಸದ ಸಿಬ್ಬಂದಿ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತಸಹಾಯಕ... ಹೀಗೆ ಹಲವರಿಗೆ ಕರೊನಾ ವಕ್ಕರಿಸಿದೆ.