ಸಿಡಿಮದ್ದು ಕಡಿದು ಹಸುಗೆ ಗಾಯ

blank

ಹಲಗೂರು: ಇಲ್ಲಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಕಾಡು ಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಇಟ್ಟಿದ್ದ ಸಿಡಿಮದ್ದು ಕಡಿದು ಹಸುವೊಂದರ ಬಾಯಿ ಛಿದ್ರವಾಗಿದೆ.ಮೂಲತಃ ಬ್ಯಾಡರಹಳ್ಳಿ ಗ್ರಾಮದ ನಿವಾಸಿ ಶಿವರಾಮ್ ಎಂಬುವರ ಜಮೀನಿನಲ್ಲಿ ಯಾರೊ ಅಪರಿಚಿತರು ಕಾಡು ಪ್ರಾಣಿಗಳ ಬೇಟೆಗಾಗಿ ಮೂರು ಕಡೆ ಸಿಡಿಮದ್ದನ್ನು ಇಟ್ಟಿದ್ದರು. ಈ ವೇಳೆ ಮೇಯಲು ಹೋದ ಹಸು ಸಿಡಿಮದ್ದು ಸಿಡಿದು ತೀರ್ವ ಗಾಯಗೊಂಡಿದೆ. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀಧರ್, ಎಸ್‌ಐ ಲೋಕೇಶ್ ಸ್ಥಳ ಪರಿಶೀಲಿಸಿದರು. ಈ ವೇಳೆ ಮತ್ತೆ ಎರಡು ಕಡೆ ಸಿಡಿಮದ್ದು ಅಡಗಿಸಿಟ್ಟಿದ್ದನ್ನು ಶ್ವಾನದಳ ಪತ್ತೆ ಮಾಡಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವರಾಮ್, ಸುಮಾರು ವರ್ಷಗಳಿಂದ ನಾವು ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಇದೀಗ ಸಿಡಿಮದ್ದು ಸೇವಿಸಿ ಹಸುವಿನ ಬಾಯಿಗೆ ಗಂಭೀರವಾಗಿ ಗಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಕೊಡುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:
Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…