More

    ಸುಗ್ರೀವಾಜ್ಞೆ ಮೂಲಕವೇ ಗೋಹತ್ಯೆ ನಿಷೇಧ ಮತ್ತೆ ಜಾರಿ

    ಬೆಂಗಳೂರು : ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ. ಆದರೆ ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದೆ. ಸುಗ್ರಿವಾಜ್ಞೆ ತರುವ ಮೂಲಕ ಮತ್ತೆ ಅದನ್ನು ಜಾರಿಗೊಳಿಸಲಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

    ಇಂದು ನಡೆದ ಸಚಿವ ಸಂಪುಟದಲ್ಲಿ ಗೋಹತ್ಯೆ ಮಸೂದೆಗೆ ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕರ್ನಾಟಕದಲ್ಲೂ ಯಶಸ್ವಿ ಆಗಲಿದೆ. ಗೋವು ನಮ್ಮ ಭಾರತೀಯ ಸಂಸ್ಕೃತಿಯ, ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನೀಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ. ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದು ಸಚಿವ ಚೌವ್ಹಾಣ್​ ಅಭಿಪ್ರಾಯ ವ್ಯಕ್ತಪಡಿಸಿದರು.

    ಇದನ್ನೂ ಓದಿ:  ಸಿಎಂ ಕುರ್ಚಿ ಹೋದ್ರೂ ಚಿಂತೆ ಇಲ್ಲ, ಅಂಟಿಕೊಂಡು ಕುಳಿತಿಲ್ಲ – ಬಿಹಾರ ಸಿಎಂ ನಿತೀಶ್ ಕುಮಾರ್ ಗರಂ

    ಬಿಜೆಪಿ ಸರ್ಕಾರದ ಅವಧಿಯಲ್ಲಿ ೨೦೧೦ ರಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಇದ್ದ ಆಕ್ಷೇಪಣೆಗಳನ್ನು ಈಗಿನ ಮಸೂದೆಯಲ್ಲಿ ಸರಿಪಡಿಸಲಾಗಿದೆ. ಹಳೆಯ ಮಸೂದೆಯಲ್ಲಿ ಎಮ್ಮೆ /ಕೋಣಗಳ ಹತ್ಯೆಗೂ ನಿಷೇಧವಿತ್ತು ಆದರೆ ೨೦೨೦ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ ೧೩ ವರ್ಷದ ಎಮ್ಮೆ/ಕೋಣಗಳಿಗೆ ನಿರ್ಬಂಧ ವಿರುತ್ತದೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಇದ್ದ ಆಕ್ಷೇಪಕಣೆ ಇಲ್ಲಿ ಪರಿಗಣನೆಗೆ ತೆಗೆದುಕೊಂಡು ಮಸೂದೆ ರೂಪಿಸಲಾಗಿದೆ ಹೀಗಿದ್ದಾಗಲೂ ಇದನ್ನು ಕಾಂಗ್ರೆಸ್ ವಿರೊಧಿಸುತ್ತಿರುವುದು ನಾಚಿಕೆಗೇಡು.

    ಇದನ್ನೂ ಓದಿ: ಸುಧಾ ವಿರುದ್ಧ ಕ್ರಮಕ್ಕೆ ಸರ್ಕಾರದಿಂದ ಸಿಗಬೇಕಿದೆ ಅನುಮತಿ – ಮತ್ತೊಂದು ಎಫ್​ಐಆರ್​ಗೆ ಎಸಿಬಿ ಸಿದ್ಧತೆ

    ೨೦೧೯ರ ಜಾನುವಾರು ಗಣತಿ ಪ್ರಕಾರ ೨,೩೮,೨೯೬ ಗೋವುಗಳನ್ನು ಪ್ರತಿವರ್ಷ ವಧೆ ಮಾಡಲಾಗುತ್ತಿದೆ. ಒಂದು ದಿನದ ವಿಳಂಬವು ೬೬೨ ಗೋವುಗಳ ವಧೆಗೆ ಕಾರಣವಾಗುತ್ತದೆ ಇದು ಎಚ್ಚರಿಕೆಯ ಗಂಟೆ ಇದೇ ವೇಗದಲ್ಲಿ ಗೋವುಗಳ ವಧೆ ನಡೆಯುತ್ತ ಹೋದರೆ ಮುಂದಿನ ದಿನಗಳಲ್ಲಿ ಗೋವುಗಳನ್ನು ಪುಸ್ತಕಗಳಲ್ಲಿ ನೋಡುವ ಸಮಯ ದೂರವಿಲ್ಲ. ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ತಡೆಯುವುದು ನಮ್ಮ ತುರ್ತು ಆದ್ಯತೆಯಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಜಾರಿಗೆ ಬಂದರೆ ಈ ಅಕ್ರಮಗಳಿಗೆ ಕಡಿವಾಣ ಬೀಳಲಿದೆ.

    ಇದನ್ನೂ ಓದಿ: ಸಿಎಂ ಕುರ್ಚಿ ಹೋದ್ರೂ ಚಿಂತೆ ಇಲ್ಲ, ಅಂಟಿಕೊಂಡು ಕುಳಿತಿಲ್ಲ – ಬಿಹಾರ ಸಿಎಂ ನಿತೀಶ್ ಕುಮಾರ್ ಗರಂ

    ಗೋವುಗಳ ಸಂರಕ್ಷಣೆಗೆ ಉತ್ತರಪ್ರದೇಶ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಭಿನ್ನವಾದ ಪ್ರಯೋಗಗಳು ನಡೆಯುತ್ತಿದ್ದು ಗೋವುಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬಂದಿದೆ. ಉದ್ಯೋಗ ಸೃಷ್ಟಿ, ಗೋವಿನ ದೇಶಿ ಉತ್ಪನ್ನಗಳ ಮಾರಾಟ ಮತ್ತು ಬಳಕೆ ಸಹ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ನನ್ನ ಎಲ್ಲ ಸಚಿವ ಸಂಪುಟ ಸಹೋದ್ಯೋಗಿಗಳಿಗೆ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜ್ಯದ ಎಲ್ಲ ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವುವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    ಮತ್ತೊಂದು ಸುಗ್ರೀವಾಜ್ಞೆ?; ಗೋಹತ್ಯೆ ನಿಷೇಧಕ್ಕಾಗಿ ವಿಶೇಷ ಪ್ರಯತ್ನ

    ವಿಧಾನಪರಿಷತ್​ನಲ್ಲಿ ಮಂಡನೆ ಆಗಲಿಲ್ಲ ಗೋಹತ್ಯೆ ನಿಷೇಧ ಮಸೂದೆ! ಕಾರಣ ಇಲ್ಲಿದೆ

    ಗೋಹತ್ಯೆ ನಿಷೇಧ ವಿಧೇಯಕದಲ್ಲಿವೆ ಈ 25 ಕಠಿಣಾತಿಕಠಿಣ ನಿಯಮಗಳು!

    ಗೋಹತ್ಯೆ ನಿಷೇಧ ವಿಧೇಯಕ ಪಾಸ್​: 5 ಲಕ್ಷ ರೂ. ದಂಡ, 7 ವರ್ಷ ಜೈಲು ಶಿಕ್ಷೆಗೆ ಅವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts