ಪೊಲೀಸರಿಂದ ದನ ಕಳ್ಳರ ಬೇಟೆ

cow
Published on

ಉಡುಪಿ: ಬಿದ್ಕಲಕಟ್ಟೆ ಪೇಟೆಯಲ್ಲಿ ಶನಿವಾರ ರಾತ್ರಿ ದನ ಕಳವು ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ದನಕಳ್ಳರನ್ನು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಪುದು ಗ್ರಾಮದ ಇಮ್ರಾನ್​ (31) ಹಾಗೂ ಗಂಜಿಮಠ ಆಜಾದ್​ ನಗರ ನಿವಾಸಿ ಇರ್ಷಾದ್​(30) ಬಂಧಿತರು. ಶನಿವಾರ ಬೆಳಗಿನ ಜಾವ 03:50ಕ್ಕೆ ಹುಣ್ಸೆಮಕ್ಕಿ ಕಡೆಯಿಂದ ಒಂದು ಸ್ಕಾರ್ಪಿಯೊ ವಾಹನದಲ್ಲಿ ಮುಖಕ್ಕೆ ಬಟ್ಟೆಯನ್ನು ಕಟ್ಟಿಕೊಂಡು ಬಂದು ರಸ್ತೆ ಬದಿ ಮಲಗಿದ್ದ ಒಂದು ಹಸುವನ್ನು ಹಿಡಿದು ಅದಕ್ಕೆ ಬಳ್ಳಿಯಿಂದ ಕುತ್ತಿಗೆಗೆ ಬಿಗಿದು ಹಿಂಸಾತ್ಮಕವಾಗಿ ಎಳೆದು ವಾಹನಕ್ಕೆ ತುಂಬಿಸಿ ಕಳವು ಮಾಡಿಕೊಂಡು ಬಿದ್ಕಲಕಟ್ಟೆಯಿಂದ ಶಿರಿಯಾರ ಕಡೆಗೆ ಹೋಗಿದ್ದರು. ಈ ಬಗ್ಗೆ ಕೋಟ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇಮ್ರಾನ್​ ವಿರುದ್ಧ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಒಟ್ಟು 35 ಪ್ರಕರಣಗಳು ದಾಖಲಾಗಿವೆ. ಇರ್ಷಾದ್​(30) ವಿರುದ್ಧ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಒಟ್ಟು 14 ಪ್ರಕರಣಗಳು ದಾಖಲಾಗಿವೆ. ಕೃತ್ಯಕ್ಕೆ ಬಳಸಿದ ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net