Zameer Ahmed Khan : ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
In the wake of the unpleasant incident of cutting a cow’s udder in Vinayak Nagar of Chamarajpet Constituency
I bought three cows at a cost of Rs. 3 lakh for the cow’s owner,
Shri.Karna’s mother Smt.Savari Ammal & his sister Smt.Amuda pic.twitter.com/Nx33pnEuzy— B Z Zameer Ahmed Khan (@BZZameerAhmedK) January 15, 2025
ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.
ಆರೋಪಿ ಬಂಧನ
ದನಗಳ ಕೆಚ್ಚಲು ಕೊಯ್ದು ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾಗಿರುವ ಸೈಯದ್ ನಸ್ರು ಎಂಬಾತನನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಈತ ಬಿಹಾರದ ಚಂಪರಣ್ ಮೂಲದ ನಿವಾಸಿ. 30 ವರ್ಷದ ಸೈಯದ್ ಕೃತ್ಯ ನಡೆದ ಪಕ್ಕದಲ್ಲೇ ಬಟ್ಟೆ ಅಂಗಡಿಯಲ್ಲಿ ಹೊಲಿಯುವ ಕೆಲಸ ಮಾಡಿಕೊಂಡಿದ್ದ. ಕುಡಿದ ಮತ್ತಿನಲ್ಲಿ ಕೃತ್ಯವೆಸಗಿರುವುದಾಗಿ ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ. ಆರೋಪಿಯನ್ನು ಬಂಧಿಸಿದ ಬಳಿಕ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಜನವರಿ 24 ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಆರ್ಸಿಬಿಗೆ ಗುಡ್ ನ್ಯೂಸ್: 50 ಎಸೆತದಲ್ಲಿ 80 ರನ್, ಫಾರ್ಮ್ಗೆ ಮರಳಿದ ಸ್ಟಾರ್ ಆಟಗಾರ! RCB
ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ರೀಲ್ಸ್ ನೋಡ್ಬೇಡಿ… ಗಂಭೀರ ಕಾಯಿಲೆ ಬರುತ್ತೆ ಎಚ್ಚರ! Reels