23.2 C
Bangalore
Saturday, December 14, 2019

ಕಾಫಿ ಉದ್ಯಮ ಪುನಶ್ಚೇತನಕ್ಕೆ ಒತ್ತಾಯ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಚಿಕ್ಕಮಗಳೂರು: ಜಿಲ್ಲೆಯ ಅತಿವೃಷ್ಟಿ, ಅನಾವೃಷ್ಟಿ, ನಿವೇಶನ ರಹಿತರ ಸಮಸ್ಯೆ ಸೇರಿ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ ತಿಳಿಸಿದರು.

ಒಂದೆಡೆ ಅತಿವೃಷ್ಟಿ, ಮತ್ತೊಂದೆಡೆ ಬರದಿಂದಾಗಿ ರೈತರು ತೊಂದರೆಗೀಡಾಗಿದ್ದಾರೆ. ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಅಡಕೆ, ಕಾಳುಮೆಣಸು ದರ ಕುಸಿದಿದೆ. ಕಾರ್ವಿುಕರಿಗೆ ಕೆಲಸವಿಲ್ಲದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಗಮನಹರಿಸಬೇಕಿದೆ. ಕಾಫಿ ಉದ್ಯಮ ಪುನಶ್ಚೇತನಕ್ಕೆ ಒತ್ತಾಯಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಮಲೆನಾಡಲ್ಲಿ ಸಾಕಷ್ಟು ಸರ್ಕಾರಿ ಭೂಮಿ ಇದೆ. ಅಲ್ಲಿ ವಸತಿ, ನಿವೇಶನ ರಹಿತರಿಗೆ ಭೂಮಿ ನೀಡುವ ಮೂಲಕ ಸಮಸ್ಯೆಗೆ ಮುಕ್ತಿ ಹಾಡಬೇಕಿದೆ. 94ಸಿ ಮತ್ತು 50, 53ರ ಅಡಿ ಅರ್ಹರಿಗೆ ಹಕ್ಕುಪತ್ರ ಸಿಗುತ್ತಿಲ್ಲ. ಈ ವಿಚಾರದಲ್ಲಿ ಶಾಸಕರು ಪಕ್ಷಪಾತ ಮಾಡುತ್ತಿದ್ದಾರೆ ಎನ್ನುವ ದೂರಿದೆ. ಈ ಕಾರಣಕ್ಕೆ ಬಹಳಷ್ಟು ಹಕ್ಕುಪತ್ರ ವಿತರಣೆಯಾಗಿಲ್ಲ. ಅರ್ಹರಿಗೆ ಅಧಿಕಾರಿಗಳ ಮುಖೇನ ನೇರವಾಗಿ ಹಕ್ಕುಪತ್ರ ಕೊಡುವಂತಾಗಬೇಕು ಎಂದು ಆಗ್ರಹಿಸುವುದಾಗಿ ಹೇಳಿದರು.

ಮಲೆನಾಡಲ್ಲಿ ಬಿದ್ದ ಮಳೆ ನೀರು ಬೇರೆಡೆಗೆ ಹರಿದು ಹೋಗುತ್ತಿದೆ. ಆದರೆ ಜಿಲ್ಲೆಯ ಅರ್ಧಕ್ಕಿಂತ ಹೆಚ್ಚು ಭಾಗ ಭೂಮಿ ನೀರಿನ ಕೊರತೆಯಿಂದ ಬರಡಾಗಿದೆ. ಅಂತರ್ಜಲ ಬತ್ತಿಹೋಗಿದೆ. ಕಡಿಮೆ ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸುವ ಸಾಧ್ಯತೆ ಇದ್ದರೂ ಜನಪ್ರತಿನಿಧಿಗಳು ತಾತ್ಸಾರ ಮಾಡುತ್ತಿದ್ದಾರೆ. ಇದನ್ನು ಸಚಿವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ವಿಚಾರ ಸಂಕಿರಣ 16ಕ್ಕೆ: ನರೇಂದ್ರ ಮೋದಿ ಆಡಳಿತದ ಜನವಿರೋಧಿ ನೀತಿಗಳ ವಿರುದ್ಧ ರಾಜಕೀಯ ಜಾಗೃತಿಗಾಗಿ ಆ.16ರಂದು ನಗರದ ಡಾ. ಅಂಬೇಡ್ಕರ್ ಭವನದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಎಚ್.ಎಂ.ರೇಣುಕಾರಾಧ್ಯ ಹೇಳಿದರು. ಸಿಪಿಐ ರಾಷ್ಟ್ರೀಯ ನಾಯಕ ಡಾ. ಸಿದ್ದನಗೌಡ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಮಾಜಿ ಶಾಸಕ ವೈಎಸ್​ವಿ ದತ್ತ, ನಿವೃತ್ತ ಪ್ರಾಚಾರ್ಯ ಎಚ್.ಎಂ.ರುದ್ರಸ್ವಾಮಿ ವಿಚಾರ ಮಂಡಿಸುವರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಡಿ.ಎಲ್.ವಿಜಯಕುಮಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್, ಬಿಎಸ್​ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...