More

    ಚುನಾವಣಾ ಬಾಂಡ್ ಹಗರಣ ಕುರಿತು ಸುಪ್ರೀಂಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆಗೆ ಸಿಪಿಐ (ಎಂ) ಒತ್ತಾಯ

    ಮೈಸೂರು: ಚುನಾವಣಾ ಬಾಂಡ್ ಹಗರಣ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಸರ್ಕಾರವನ್ನು ಒತ್ತಾಯಿಸಿದರು.
    ಚುನಾವಣೆ ಉದ್ದೇಶಕ್ಕಾಗಿ ಬಿಜೆಪಿ ಬಾಂಡ್ ಮೂಲಕ ಸುಮಾರು 8,252 ಕೋಟಿ ರೂ.ಪಡೆದಿದೆ. ಇಲ್ಲಿ ಅಧಿಕಾರ ದುರುಪಯೋಗವಾಗಿದ್ದು, ಹಲವು ತನಿಖಾ ಸಂಸ್ಥೆಗಳಿಗೆ ಹೆದರಿ, ಉದ್ಯಮದ ಲಾಭಕ್ಕಾಗಿ ಹಣ ನೀಡಿರುವುದು ಕಂಡುಬಂದಿದೆ. ಇದು ನರೇಂದ್ರ ಮೋದಿ ಸರ್ಕಾರದ ಭ್ರಷ್ಟಾಚಾರ ಸೂಚಿಸುತ್ತದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
    ರಾಜಕೀಯ ದ್ವೇಷ ಸಾಧಿಸಲು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುವುದರಲ್ಲಿಯೂ ಕೇಂದ್ರ ನಿರತವಾಗಿರುವುದು ಇದರಿಂದ ಸಾಬೀತಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು. ಬರ ಪರಿಹಾರದಲ್ಲಿ ರಾಜ್ಯದ ಹಿತ ಕಾಯುವಲ್ಲಿ ಬಿಜೆಪಿ ಸಂಸದರು ಸಂಪೂರ್ಣ ವಿಫಲವಾಗಿದ್ದಾರೆ. ಎರಡು ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣ ವಿಷಯದಲ್ಲೂ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಮತ್ತೆ ಅಧಿಕಾರ ಪಡೆಯಲು ಅಭ್ಯರ್ಥಿಗಳನ್ನು ಬದಲಾಯಿಸಿ, ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿದರು.
    ಇಂಥ ಫ್ಯಾಸಿಸ್ಟ್ ಮನೋಭಾವದ ಬಿಜಿಪಿ ಹಾಗೂ ಅದರ ಮಿತ್ರ ಪಕ್ಷಗಳನ್ನು ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಮತದಾರರು ತಿರಸ್ಕರಿಸಬೇಕು ಎಂದರು.
    ಜಿಲ್ಲಾ ಕಾರ್ಯದರ್ಶಿ ಜಗದೀಶ ಸೂರ್ಯ, ಸಮಿತಿ ಸದಸ್ಯರಾದ ಜಿ. ಜಯರಾಮ್, ಕೆ ಬಸವರಾಜು, ಎನ್.ವಿಜಯಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts