More

    ಸಿಪಿಐನಿಂದ ಆಹೋರಾತ್ರಿ ಧರಣೆ ವಾಪಸ್

    ಚಿಕ್ಕಮಗಳೂರು: ಜಿಲ್ಲೆಯಲ್ಲಿನ ನಿವೇಶನ ರಹಿತರಿಗೆ ನಿವೇಶನ ಗುರುತಿಸಲು ಜಿಲ್ಲಾಡಳಿತ ಒಂದು ತಿಂಗಳ ಕಾಲಾವಕಾಶ ಪಡೆದಿರುವ ಹಿನ್ನೆಲೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ಹಾಗೂ ನಿವೇಶನ ರಹಿತರು ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಸದ್ಯಕ್ಕೆ ಹಿಂಪಡೆಯಲಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಸ್.ಎಲ್.ರಾಧಾ ಸುಂದರೇಶ್ ತಿಳಿಸಿದರು.
    ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆಜಾದ್‌ಪಾರ್ಕ್ ವೃತ್ತದಲ್ಲಿ ಕಳೆದ ನಾಲ್ಕು ದಿನಗಳಿಂದ ನಿವೇಶನ ರಹಿತರು ಮತ್ತು ಭಾರತ ಕಮ್ಯೂನಿಸ್ಟ್ ಪಕ್ಷದ ಮುಖಂಡರು ಧರಣಿ ನಡೆಸಿದ್ದು, ಇದಕ್ಕೆ ಸ್ಪಂದಿಸಿರುವ ಜಿಲ್ಲಾಡಳಿತ ಹಾಗೂ ಶಾಸಕರು ಒಂದು ತಿಂಗಳಲ್ಲಿ ನಿವೇಶನ ರಹಿತರಿಗೆ ನಿವೇಶನ ಗುರುತಿಸುವ ಭರವಸೆ ನೀಡಿದ್ದಾರೆ. ಒಂದು ವೇಳೆ ಭರವಸೆ ಹುಸಿಯಾದಲ್ಲಿ ಮತ್ತೇ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
    ವಸತಿ ಮತ್ತು ನಿವೇಶನ ರಹಿತರಿಗೆ ವಸತಿ, ನಿವೇಶನ ನೀಡುವಂತೆ 10-15ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ನಿವೇಶನ ಮತ್ತು ಮನೆ ನೀಡಿಲ್ಲ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ 980 ಎಕರೆ ಜಮೀನು ನಿವೇಶನ ರಹಿತರಿಗೆ ನೀಡಲು ಮೀಸಲಿಡಲಾಗಿದೆ ಎಂದಿದ್ದರು. ಅದು ಕಾರ್ಯರೂಪಕ್ಕೆ ಬಂದಿಲ್ಲ. ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ ತಾಲೂಕಿನಲ್ಲಿರುವ ನಿರಾಶ್ರಿತರ ಪಟ್ಟಿ ನೀಡಿ, ಜಮೀನು ಗುರುತಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದು, ಗ್ರಾಮ ಪಂಚಾಯತಿಯಿಂದ ಮೂಲಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
    ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಮಂಡಳಿ ಸದಸ್ಯ ಎಚ್.ಎಂ.ರೇಣುಕಾರಾಧ್ಯ ಮಾತನಾಡಿ, ನಿವೇಶನ ರಹಿತರಿಗೆ ನಿವೇಶನ ಮತ್ತು ಮನೆ ನೀಡಲು ಇಲ್ಲಿಯವರೆಗೂ ಸಾಧ್ಯವಾಗಿಲ್ಲ ಎಂದಾದರೆ ಇಲ್ಲಿಯವರೆಗೆ ಆಡಳಿತ ನಡೆಸಿದ ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳು ಕಾರಣರಾಗಿದ್ದಾರೆ. ಜನಪ್ರತಿನಿಧಿಗಳು ಉಳ್ಳವರಿಗೆ ಭೂಮಿ ಒತ್ತುವರಿಯನ್ನು ಲೀಸ್‌ಗೆ ನೀಡುವುದಾಗಿ ಹೇಳುತ್ತಿದ್ದು ನಿವೇಶನ ರಹಿತರ ನಿವೇಶನಗಳ ಬಗ್ಗೆ ಮಾತನಾಡದಿರುವುದು ಖಂಡನೀಯ. ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಅವರು ಶ್ರೀಮಂತ ಒತ್ತುವರಿದಾರರ ಒತ್ತುವರಿ ಜಮೀನು ಖುಲ್ಲಾ ಮಾಡಬೇಡಿ ಎಂದು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಕರೆದೊಯ್ದಿರುವುದು ಖಂಡನೀಯ ಎಂದರು.
    ಸುದ್ದಿಗೋಷ್ಟಿಯಲ್ಲಿ ತಾಲೂಕು ಸಹ ಕಾರ್ಯದರ್ಶಿ ಹೆಡದಾಳ್ ಕುಮಾರ್, ತಾಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts