ಸಾಮಾನ್ಯ ಪ್ರವೇಶ ಪರೀಕ್ಷೆ ಜಾರಿಗೆ ಸಿಪಿಐಎಂ ಪಟ್ಟು

ನೀಟ್​ ಅಕ್ರಮ, ಹಗರಣ ಖಂಡಿಸಿ ಪ್ರತಿಭಟನೆ, ಶಿಕ್ಷಣದಲ್ಲಿ ಖಾಸಗೀಕರಣ ನೀತಿ ಸಲ್ಲ

ದೊಡ್ಡಬಳ್ಳಾಪುರ: ನೀಟ್​ ಪರೀಕ್ಷೆ ಅಕ್ರಮ ವಿರೋಧಿಸಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್​ಟಿಎ) ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜಾರಿಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂನಿಂದ ತಾಲೂಕು ಕಚೇರಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ದೇಶದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವೈದ್ಯಕಿಯ ಮತ್ತು ಇತರ ಕೋರ್ಸ್​ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರಮಟ್ಟದಲ್ಲಿ ನಡೆಸುವ ನೀಟ್​ ಪರೀಕ್ಷೆಯ ಫಲಿತಾಂಶ ಜೂ.4ರಂದು ಪ್ರಕಟವಾದ ನಂತರ, ನ್ಯಾಷನಲ್​ ಟೆಸ್ಟ್​ ಏಜೆನ್ಸಿ (ಎನ್​ಟಿಎ) ಪರೀಕ್ಷೆಯ ಫಲಿತಾಂಶದಲ್ಲಿನ ನಡವಳಿಕೆ ಬಗ್ಗೆ ಹಾಗೂ ಪರೀಕ್ಷೆ ನಡೆಸುವ ಬಗ್ಗೆ ಪಾರದರ್ಶಕತೆ ಪ್ರಶ್ನಿಸುವ ಹಲವಾರು ದೂರುಗಳು ಬರುತ್ತಿವೆ ಎಂದು ಸಿಪಿಐಎಂ ಕಾರ್ಯದರ್ಶಿ ರುದ್ರಾರಾಧ್ಯ ದೂರಿದರು.
ಕಾಲೇಜು ಶುಲ್ಕ ಹೆಚ್ಚಿಸುತ್ತಾ ಹಣವುಳ್ಳವರಿಗೆ ಮಾತ್ರ ವೈದ್ಯಕಿಯ ಶಿಕ್ಷಣ ಎಂಬ ಖಾಸಗೀಕರಣ ನೀತಿಯನ್ನು ಎನ್​ಎಂಸಿ ಮತ್ತು ಎನ್​ಟಿಎ ಸಂಸ್ಥೆಗಳು ಜಂಟಿಯಾಗಿ ಪ್ರೋತ್ಸಾಹಿಸುತ್ತಿವೆ. ಇದು ದೇಶದ ಭವಿಷ್ಯಕ್ಕೆ ಅಪಾಯಕಾರಿಯಾಗಿದೆ. ವೈದ್ಯಕಿಯ ಕ್ಷೇತ್ರದಲ್ಲಿ ರಾಜ್ಯ ಆಧಾರಿತ ಪ್ರವೇಶ ಪರೀಕ್ಷೆ ಪದ್ಧತಿಯನ್ನು ಬದಲಾಯಿಸಲು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಈಗ ನೀಟ್​&ಯುಜಿಸಿಗೆ ಸಂಬಂಧಿಸಿದಂತೆಯೂ ಈ ಆರೋಪ ಸಾಬೀತಾದಂತಾಗಿದೆ ಎಂದರು.
ಜಿಲ್ಲಾ ಮುಖಂಡ ಪಿ.ಎ.ವೆಂಕಟೇಶ್​ ಮಾತನಾಡಿ, ಎನ್​ಟಿಎ ಪ್ರಾರಂಭವಾದಾಗಿನಿಂದ ಪ್ರಮುಖ ಪರೀೆಗಳಲ್ಲಿ ಅವ್ಯವಹಾರಗಳು ನಡೆಯುತ್ತಿದೆ. ಇಂತಹ ಸಂಸ್ಥೆಯು ಪರೀಕ್ಷೆಯನ್ನು ನಡೆಸಲು ಅಸಮರ್ಥವಾಗಿದೆ ಎಂದು ಮತ್ತೊಮ್ಮೆ ಸಾಬೀತಾಗಿದೆ. ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇದರಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಈ ಪ್ರಕರಣಕ್ಕೆ ಸುಪ್ರೀಂ ಕೋರ್ಟಿನ ನ್ಯಾಯಾಧೀಶರ ಸಮಿತಿ ರಚನೆ ಮಾಡಬೇಕು ಎಂದು ಆಗ್ರಹಿಸಿದರು. ಎಸ್​ಎಫ್​ಐ ಮುಖಂಡ ಸುಲೆಮಾನ್​ ಮತ್ತಿಹಳ್ಳಿ ಮಾತನಾಡಿ, ಪ್ರತಿವರ್ಷ ನೀಟ್​ ಪರೀಕ್ಷೆಯಿಂದ ಅನ್ಯಾಯಕ್ಕೊಳಗಾದ ಸುಮಾರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಒಬ್ಬ ವಿದ್ಯಾರ್ಥಿಗೆ ನೀಟ್​ ಪರೀಕ್ಷೆಯ ಕೋಚಿಂಗ್​ಗೆ ಲಾಂತರ ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಹೀಗಾಗಿ ಬಡಕುಟುಂಬದ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆಯಲು ವಂಚಿತರಾಗುತ್ತಿದ್ದಾರೆ. ನೀಟ್​ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕೂಡಲೇ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಮಾಡಬೇಕು. ಎನ್​ಟಿಎ ರದ್ದುಪಡಿಸಲು ಮತ್ತು ಇಲ್ಲಿಯವರೆಗಿನ ಅದರ ಎಲ್ಲ ಹಗರಣಗಳನ್ನು ತನಿಖೆ ನಡೆಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಹಲವಾರು ಪರೀಕ್ಷೆಗಳನ್ನು ನಡೆಸಲು ಎನ್​ಟಿಎ ವಿಫಲವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ. ಆದ್ದರಿಂದ ಎನ್​ಟಿಎ ರದ್ದುಪಡಿಸಬೇಕು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮದ ನೇರ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್​ ರಾಜೀನಾಮೆ ನೀಡಬೇಕು ಎಂದು ಮುಖಂಡ ವೆಂಕಟೇಶ್​ ಒತ್ತಾಯಿಸಿದರು.

Share This Article

ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್​ ಮಾಡಿಕೊಳ್ಳಿ

ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…

ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಈಗ ಹೇಳಿರುವ ಸರಳ ಪರಿಹಾರಗಳನ್ನು…

ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!

ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…