More

    ಮಳವಳ್ಳಿಯಲ್ಲಿ ಸಿಪಿಐಎಂ ಪ್ರತಿಭಟನೆ

    ಮಳವಳ್ಳಿ: ರಾಜ್ಯಗಳಿಗೆ ತೆರಿಗೆ ಪಾಲನ್ನು ನ್ಯಾಯಯುತವಾಗಿ ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂದು ಆರೋಪಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್‌ವಾದಿ) ಕಾರ್ಯಕರ್ತರು ಗುರುವಾರ ಪಟ್ಟಣದ ಅನಂತರಾಮ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.


    ಹೋರಾಟದ ನೇತೃತ್ವ ವಹಿಸಿದ್ದ ಸಿಪಿಐಎಂ ರಾಜ್ಯ ಸಮಿತಿ ಸದಸ್ಯೆ ದೇವಿ ಮಾತನಾಡಿ, ರಾಜ್ಯ ಸರ್ಕಾರಗಳಿಗೆ ನ್ಯಾಯಯುತವಾಗಿ ನೀಡಬೇಕಾದ ತೆರಿಗೆ ಪಾಲನ್ನು ನೀಡದೆ ರಾಜ್ಯಗಳ ಹಕ್ಕುಗಳನ್ನು ದಮನ ಮಾಡಿ ತನ್ನ ಪಾಲಿನ ಹಣಕ್ಕಾಗಿ ಬೇಡುವ ಸ್ಥಿತಿಗೆ ಕೇಂದ್ರ ಸರ್ಕಾರ ನಿರ್ಮಾಣ ಮಾಡಿದೆ ಎಂದು ಆರೋಪಿಸಿದರು.


    ರಾಜ್ಯಗಳ ಮೇಲೆ ನಿಯಂತ್ರಣ ಸಾಧಿಸಲು ಹೊರಟಿರುವ ಕೇಂದ್ರ ಸರ್ಕಾರದ ಧೋರಣೆ ಸರ್ವಾಧಿಕಾರಿಯಾಗಿದ್ದು, ಸಂವಿಧಾನದ ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲು ಹೊರಟಿದ್ದಾರೆ ಎಂದು ಆರೋಪಿಸಿದರು.


    ಪ್ರಸ್ತುತ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ನಂತರ ತಾಲೂಕು ಕಚೇರಿಗೆ ತೆರಳಿ ಪ್ರಧಾನಿಮಂತ್ರಿ ಕಾರ್ಯಾಲಯಕ್ಕೆ ಉಪ ತಹಸೀಲ್ದಾರ್ ಬಿ.ವಿ. ಕುಮಾರ್ ಮೂಲಕ ಮನವಿ ಸಲ್ಲಿಸಿದರು.


    ಸಿಪಿಐಎಂ ಜಿಲ್ಲಾ ಸದಸ್ಯರಾದ ಎನ್.ಎಲ್.ಭರತ್ ರಾಜ್, ಎನ್.ಲಿಂಗರಾಜಮೂರ್ತಿ, ತಾಲೂಕು ಕಾರ್ಯದರ್ಶಿ ಸುಶೀಲಾ, ಆನಂದ, ಗುರುಸ್ವಾಮಿ, ಮಹದೇವಮ್ಮ, ತಿಮ್ಮೇಗೌಡ, ಶಿವಕುಮಾರ್, ಸುನಂದಮ್ಮ, ದೇವರಾಜ್, ಲಿಂಗರಾಜ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts