More

    ಕರ್ನಾಟಕಕ್ಕೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಿಪಿಐಎಂ ಪ್ರತಿಭಟನೆ

    ಶಿವಮೊಗ್ಗ: ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು, ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಕೂಡಲೆ ಬಿಡುಗಡೆ ಮಾಡಬೇಕು. ಬರ ಪರಿಹಾರ ನೀಡಬೇಕು. ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವಂತೆ ಮಾಡುವುದನ್ನು ನಿಲ್ಲಿಸಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಎಂದು ಒತ್ತಾಯಿಸಿದರು.
    ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ, ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಬಾರದು. ರಾಜ್ಯಪಾಲರ ಹಸ್ತಕ್ಷೇಪ ರಾಜ್ಯದಲ್ಲಿ ಇರಬಾರದು. ವಿವಿಗಳ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು. ರಾಜ್ಯ ಸರ್ಕಾರ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆಯಬಾರದು ಎಂದು ಆಗ್ರಹಿಸಿದರು.
    ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ.ನಾರಾಯಣ, ಮುಖಂಡರಾದ ಕೆ.ಪ್ರಭಾಕರನ್, ಎಂ.ಅನಂತರಾಮ್, ಕೆ.ಮಂಜಣ್ಣ, ತುಳಸಿಪ್ರಭ, ಜಾರ್ಜ್ ಸಲ್ಡಾನಾ, ಅಬ್ದುಲ್ ಸುಭಾನ್, ರೇಣುಕಮ್ಮ, ಮುನಿರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts