ಪಟಾಕಿ ಗೋದಾಮು ಸ್ಫೋಟ | 9 ಜನರ ದುರಂತ ಅಂತ್ಯ, 100ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

blast
Published on

ತಮಿಳುನಾಡು: ತಮಿಳುನಾಡಿನಲ್ಲಿ ಪಟಾಕಿ ಗೋದಾಮಿನಲ್ಲಿ ಮಹಾ ಸ್ಪೋಟ ಸಂಭವಿಸಿದ್ದು ಅಪಾರ ಆಸ್ತಿ ಪಾಸ್ತಿ ನಷ್ಟವಾಗಿದೆ.

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದ್ದು ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಉಂಟಾಗಿ ಭಾರಿ ಸ್ಫೋಟ ಉಂಟಾಗಿದ್ದು ಒಂಬತ್ತು ಮಂದಿಯ ದಾರುಣ ಸಾವು ಸಂಭವಿಸಿದೆ. ಈ ಭಾರಿ ದುರಂತದಲ್ಲಿ ನೂರಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳು ಉಂಟಾಗಿದೆ.

ಗೋಡೌನ್​ನಲ್ಲಿ ಲೋಡ್ ಮಾಡಿ ಇಟ್ಟಿದ್ದ ಪಟಾಕಿಗಳನ್ನು ಇಡಲಾಗಿದ್ದು ಈ ವೇಳೆ ಇಡೀ ಮಳಿಗೆಯೇ ಸ್ಫೋಟಗೊಂಡಿದೆ. ಇದರಿಂದಾಗಿ ಅಕ್ಕಪಕ್ಕದ ಏಳೆಂಟು ಮನೆಗಳು ಸಂಪೂರ್ಣ ಧ್ವಂಸವಾಗಿದ್ದು ಗಾಯಾಳುಗಳನ್ನ ಕೃಷ್ಣ ಗಿರಿಯ ಮೆಡಿಕಲ್ ಕಾಲೇಜಗೆ ರವಾನೆ ಮಾಡಲಾಗಿದೆ. ತಕ್ಷಣ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳ ದೌಡಾಯಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತರಲು ಶ್ರಮಿಸುತ್ತಿದ್ದಾರೆ.

ಗಾಯಗೊಂಡವರನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಘಟನೆ ನಡೆದದ್ದು ಹೇಗೆ?

ಗೋಡೌನ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಶೇಖರಣೆ ಮಾಡಿ ಇಡಲಾಗಿತ್ತು. ಇಂದು ಬೆಳಗ್ಗೆ ಸುಮಾರು 9.30ರ ಸುಮಾರಿಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದರಿಂದಾಗಿ ಏಕಾಏಕಿ ಪಟಾಕಿ ಗೋಡೌನ್ ಸ್ಪೋಟಗೊಂಡಿದೆ. ಇದರಿಂದಾಗಿ ಸುತ್ತಮುತ್ತಲಿನ ಏಳೆಂಟು ಮನೆಗಳಿಗೆ ಭಾರಿ ಹಾನಿ ಸಂಭವಿಸಿದೆ. ಜನನಿಬಿಡ ಪ್ರದೇಶದಲ್ಲಿ ಈ ಗೋದಾಮು ಇದ್ದಿದ್ದರಿಂದ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net