

ನವದೆಹಲಿ: ಅಪಘಾತ ನಿಯಂತ್ರಣ ಹಾಗೂ ಮಕ್ಕಳೊಂದಿಗಿನ ಸವಾರಿ ವೇಳೆ ಹೆಚ್ಚಿನ ಸುರಕ್ಷತೆಗಾಗಿ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.
ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರೆ ಅವರಿಗೆ ಕ್ರ್ಯಾಷ್ ಹೆಲ್ಮೆಟ್ ಕಡ್ಡಾಯ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ತಿಳಿಸಿದೆ. ಮಾತ್ರವಲ್ಲ ಅಂಥ ದ್ವಿಚಕ್ರ ವಾಹನಗಳ ವೇಗವನ್ನು ಗಂಟೆಗೆ 40 ಕಿ.ಮೀ.ಗೆ ನಿರ್ಬಂಧಿಸಲಾಗಿದೆ.
ಕೇಂದ್ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ಈ 4 ವರ್ಷದ ಒಳಗಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮತ್ತು ಅಂಥ ವಾಹನಗಳ ವೇಗಕ್ಕೂ ನಿರ್ಬಂಧ ವಿಧಿಸುವ ಕುರಿತಂತೆ ಕಳೆದ ಅಕ್ಟೋಬರ್ನಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.