ಬೈಂದೂರು: ಎಸ್‌ಎಸ್‌ಎಲ್‌ಸಿ ಪ್ರತಿ ವಿದ್ಯಾರ್ಥಿಯ ಜೀವನದಲ್ಲಿ ಅತೀ ಪ್ರಮುಖವಾದ ಟ್ಟ. ಹಾಗಾಗಿ ಶಾಲಾ ಶಿಕ್ಷಕರು ಸೇರಿದಂತೆ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಅರಿತುಕೊಳ್ಳಬೇಕು. ಪರಸ್ಪರ ಸಮನ್ವಯ ಸಾಧಿಸಿದರೆ ವಾತ್ರ ಉತ್ತಮ ಫಲಿತಾಂಶ ಹೊರ ಹೊಮ್ಮಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರಸ್ತುತ ಸಾಲಿನ ಫಲಿತಾಂಶದ ಕುರಿತು ಪರಾಮರ್ಶೆ ನಡೆಸಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಈಗಿನಿಂದಲೇ ಕಾರ್ಯಯೋಜನೆ ಹಾಕಿ ಕೊಳ್ಳಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ, ಬೈಂದೂರು ಕ್ಷೇತ್ರದ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‌ಸಿಸಿ, ಸಿಆರ್‌ಪಿ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಮಾತನಾಡಿದರು.
ಮಕ್ಕಳಲ್ಲಿ ಮಕ್ಕಳು ಓದುವ ಹವ್ಯಾಸ ಹೆಚ್ಚಿಸುವ ಉದ್ದೇಶದಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಶಾಲಾ ಗ್ರಂಥಾಲಯಗಳಿಗಾಗಿ ಈಗಾಗಲೇ 2 ಲಕ್ಷ ರೂ. ಮೊತ್ತದಲ್ಲಿ ಪುಸ್ತಕಗಳನ್ನು ಖರೀದಿಸಲಾಗಿದ್ದು, ಕ್ಷೇತ್ರ ವ್ಯಾಪ್ತಿಯ ಎಲ್ಲ ಸರ್ಕಾರಿ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ ಮೊದಲ ವಾರದಲ್ಲಿ ಹಂಚಿಕೆ ವಾಡಲಾಗುವುದು ಎಂದು ತಿಳಿಸಿದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ. ನಾಯ್ಕ, ಬೈಂದೂರು ಹಾಗೂ ಕುಂದಾಪುರ ವಲಯ ವ್ಯಾಪ್ತಿಯ ಶಿಕ್ಷಣ ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು ಉಪಸ್ಥಿತರಿದ್ದರು.