More

    ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ

    ಅಳವಂಡಿ: ಮಕ್ಕಳೆ ದೇಶದ ಸಂಪತ್ತು, ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾವಂತರನ್ನಾಗಿ ಮಾಡಿದರೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯ ಶಿಕ್ಷಕ ವೀರಣ್ಣ ಮಟ್ಟಿ ತಿಳಿಸಿದರು.

    ಇದನ್ನೂ ಓದಿ: ಮಕ್ಕಳ ಪ್ರತಿಭೆ ಗುರುತಿಸಿ

    ಸಮೀಪದ ಹಟ್ಟಿ ಗ್ರಾಮ ಪಂಚಾಯತನಲ್ಲಿ ಜಿಪಂ, ತಾಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಇತರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಗುರುವಾರ ಮಾತನಾಡಿದರು.

    ಕಡ್ಡಾಯ ಶಿಕ್ಷಣ ನೀತಿ ಜಾರಿಯಲ್ಲಿದ್ದು ಪ್ರತಿ ಮಗುವು ಶಿಕ್ಷಣ ಪಡೆಯಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

    ಪಿಡಿಓ ರತ್ನವ್ವ ಕಂಬಳಿ ಮಾತನಾಡಿ, ಗ್ರಾಮ ಪಂಚಾಯತ ಶಾಲೆಗಳಿಗೆ ಅವಶ್ಯ ಇರುವ ಮೂಲಭೂತ ಸೌಲಭ್ಯ ಕಲ್ಪಿಸಿ, ಮಕ್ಕಳ ಶಿಕ್ಷಣಕ್ಕೆ ಅನೂಕೂಲ ಮಾಡಲಾಗುವುದು. ಬಾಲ್ಯವಿವಾಹ, ಮಕ್ಕಳ ಸಾಗಾಣಿಕೆ, ಬಾಲ ಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
    ಮಕ್ಕಳು ಶಾಲೆಯಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

    ಗ್ರಾಪಂ ಅಧ್ಯಕ್ಷೆ ಪರವಿನಬಾನು ಆಲೂರ, ಉಪಾಧ್ಯಕ್ಷ ನಿಂಗನಗೌಡ ಪಾಟೀಲ, ಎಸಿಡಿಪಿಓ ರೂಪಾ ಗಂಧದ, ಅಂಗನವಾಡಿ ಮೇಲ್ವಿಚಾರಕಿ ಬಸಮ್ಮ ಹಡಪದ, ಪ್ರಮುಖರಾದ ವಿಷ್ಣು ಹಾಳಕೇರಿ, ಮಹೇಶ ಡಂಬಳ, ಜಂಗ್ಲಿಸಾಬ ಒಂಟಿ, ಗುಡದಪ್ಪ, ರಣದಪ್ಪ, ಕೊಟ್ರೇಶ ಮೇಗಳಮನಿ, ಮುಖ್ಯ ಶಿಕ್ಷಕ ಹನುಮಂತಪ್ಪ ಗುಡಿ, ಬಸಪ್ಪ, ಅನೂಸೂಯಾ, ಗೋಣೇಪ್ಪ, ಮಹಮದ್‌ರಪೀ, ಹನುಮಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts