More

    ತಂತ್ರಾಂಶದಲ್ಲಿ ನೋಂದಣಿಗೆ ಜಾಗೃತಿ ಮೂಡಿಸಿ

    ರಾಯಚೂರು: ರೈತರಿಗೆ ಬೆಳೆ ಹಾನಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರೈತರು ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ಅಕಾರಿಗಳು ಜಾಗೃತಿ ಮೂಡಿಸಬೇಕು ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅಕಾರಿಗಳಿಗೆ ಸೂಚಿಸಿದರು.
    ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಜರುಗಿದ ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರು ಕಡ್ಡಾಯವಾಗಿ ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಭೂಮಿ, ಬೆಳೆ ವಿವರವನ್ನು ನೋಂದಾಯಿಸಿಕೊಳ್ಳುವ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
    ಗ್ರಾಮೀಣ ಭಾಗದಲ್ಲಿ ವಿವಿಧ ಇಲಾಖೆಗಳು ಬಾಕಿ ಉಳಿಸಿಕೊಂಡಿರುವ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕುಲ. ಕುಡಿಯುವ ನೀರಿನ ಕಾಮಗಾರಿಗಳು ಪೂರ್ಣಗೊಂಡ ನಂತರ ರಸ್ತೆಗಳನ್ನು ದುರಸ್ತಿಗೊಳಿಸಬೇಕು.
    ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಹಳ್ಳಿಗಳಲ್ಲಿ ಮರಳು ಸಾಗಣೆ ಟಿಪ್ಪರ್ ಓಡಾಟದಿಂದ ಗ್ರಾಮೀಣ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಅಕ್ರಮ ಮರಳು ಸಾಗಣೆ ವಾಹನಗಳ ವಿರುದ್ಧ ಕ್ರಮಕೈಗೊಳ್ಳಬೇಕು.
    ತಾಲೂಕು ವ್ಯಾಪ್ತಿಯ ಸರ್ಕಾರ ಶಾಲೆಗಳ ಶಿಕ್ಷಕರ ಕೊರತೆಯಿದ್ದಲ್ಲಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸಭೆಗೆ ಗೈರು ಹಾಜರಾಗುವ ಅಕಾರಿಗಳ ವಿರುದ್ಧ ಕ್ರಮಕ್ಕೆ ಜಿ.ಪಂ. ಸಿಇಒಗೆ ಶಿಾರಸ್ಸು ಮಾಡಲಾಗುವುದು ಎಂದು ಬಸನಗೌಡ ದದ್ದಲ್ ಎಚ್ಚರಿಸಿದರು.
    ಸಭೆಯಲ್ಲಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್ ಆರ್‌ಎಪಿಎಂಎಸ್ ಅಧ್ಯಕ್ಷ ಜಯವಂತರಾವ್ ಪತಂಗೆ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಸ್ವಾಮಿ ಅಲ್ಕೂರು, ಸಹಾಯಕ ಆಯುಕ್ತೆ ಮಹೆಬೂಬಿ, ತಹಸೀಲ್ದಾರ್ ಸುರೇಶ ವರ್ಮಾ, ತಾ.ಪಂ. ಇಒ ಚಂದ್ರಶೇಖರ ಪವಾರ್ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts