ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಪರಿಸರ ಜಾಗೃತಿ ಮೂಡಿಸಿ

kota (2)
Published on

ಕೋಟ: ಪರಿಸರದ ಮೇಲೆ ಮನುಕುಲ ನಿರಂತರ ದರ್ಪ ತೊರಿಸುತ್ತಿದ್ದಾರೆ ಇದರ ದುಷ್ಪರಿಣಾಮವನ್ನು ನಾವು ಈಗಾಗಲೇ ಅನುಭವಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಮುಂದಿನ ಜನಾಂಗಕ್ಕಾಗಿ ಈಗಾಗಲೇ ನಾವುಗಳು ಗಿಡಮರಗಳನ್ನು ನೆಟ್ಟು ಪೋಷಿಸುವ ಕಾರ್ಯ ವಾಡಬೇಕಿದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು.

ಸೋಮವಾರ ಕೋಟ ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಮೂರ್ತೆದಾರರ ಸೇವಾ ಸಹಕಾರಿ ಸಂ ಕೋಟ, ಎಸ್‌ಸಿಐ ಉಡುಪಿ ಟೆಂಪಲ್ ಸಿಟಿ, ಕೋಟ ಲಿಜನ್, ಜೆಸಿಐ ಕಲ್ಯಾಣಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಏಕ್ ಪೇಡ್ ವಾ ಕೆ ನಾಮ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಭೆ ಅಧ್ಯಕ್ಷತೆ ವಹಿಸಿದ್ದ ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂ ಅಧ್ಯಕ್ಷ ಕೆ.ಕೊರಗ ಪೂಜಾರಿ ಮಕ್ಕಳಿಗೆ ಗಿಡವನ್ನು ಹಸ್ತಾಂತರಿಸಿದರು.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್, ಮುಖ್ಯಶಿಕ್ಷಕಿ ಪುಷ್ಪಾವತಿ ಎಚ್.ಹೊಳ್ಳ, ಸೀನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ನಿಕಟಪೂರ್ವ ರಾಷ್ಟ್ರೀಯ ಅಧ್ಯಕ್ಷ ಚಿತ್ರಕುಮಾರ್, ಉಡುಪಿ ಟೆಂಪಲ್ ಸಿಟಿ ಲೀಜನ್ ಅಧ್ಯಕ್ಷ ಶಿವಾನಂದ ಶೆಟ್ಟಿಗಾರ್, ಜೇಸಿಐ ಕಲ್ಯಾಣಪುರ ಅಧ್ಯಕ್ಷೆ ಎವಿಟಾ ಡಿಸೋಜ, ಜೂನಿಯರ್ ಜೇಸಿ ವಿಭಾಗದ ಅಧ್ಯಕ್ಷ ಆಯಸ್ಟೀನ್ ರಿಯೋನ್ಸ ವಾಜ್, ಜೆಸಿ ಸೀನಿಯರ್ ಚೆಂಬರ್ ಕೋಟ ಲೀಜನ್ ಅಧ್ಯಕ್ಷ ಕೇಶವ ಆಚಾರ್, ಮೂರ್ತೆದಾರರ ಸೇವಾ ಸಹಕಾರಿ ಸಂ ವಾಜಿ ಅಧ್ಯಕ್ಷ ರಾಜು ಪೂಜಾರಿ, ನಿರ್ದೇಶಕರಾದ ಮಂಜುನಾಥ ಪೂಜಾರಿ, ಕೃಷ್ಣ ಪೂಜಾರಿ ಪಿ., ಜಿ.ಸಂಜೀವ ಪೂಜಾರಿ, ಭಾರತಿ ಎಸ್.ಪೂಜಾರಿ ಉಪಸ್ಥಿತರಿದ್ದರು. ಜಗದೀಶ್ ಕೆಮ್ಮಣ್ಣು ಪ್ರತಿಜ್ಞಾ ವಿಧಿ ಭೋದಿಸಿ ಸ್ವಾಗತಿಸಿ, ವಂದಿಸಿದರು. ಸಂ ಸಿಬ್ಬಂದಿ ರಾವೇಂದ್ರ ಪೂಜಾರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net