More

    ಮಕ್ಕಳು, ಶಿಕ್ಷಕರ ಗುಣಾತ್ಮಕ ಸಂಬಂಧ ವೃದ್ಧಿಗೆ ಕಾಯ್ದೆ ರಚನೆ

    ಶೃಂಗೇರಿ: ಶಾಲಾ, ಕಾಲೇಜುಗಳ ಅಸುಪಾಸಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು, ಮಾರಾಟ ಮಾಡುವುದು ಕಂಡು ಬಂದರೆ ಅವರ ವಿರುದ್ಧ ಠಾಣೆಯಲ್ಲಿ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದೂರು ನೀಡಬಹುದು ಎಂದು ವಕೀಲ ಸುಧೀರ್‌ಕುಮಾರ್ ಮುರೋಳ್ಳಿ ಹೇಳಿದರು.
    ಆದಿಚುಂಚನಗಿರಿ ಸಮುದಾಯ ಭವನದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶನಿವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗಿರುವ ಕಾಯ್ದೆಗಳ ಕಾನೂನು ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.
    ಶಾಲೆಯಲ್ಲಿ ಮಕ್ಕಳು ಮತ್ತು ಶಿಕ್ಷಕರ ನಡುವೆ ಗುಣಾತ್ಮಕ ಸಂಬಂಧ ಬೆಳೆಸಲು ಸಂವಿಧಾನ ಕಾಯ್ದೆಗಳನ್ನು ರೂಪಿಸಿದೆ. ವಿದ್ಯಾರ್ಥಿಗಳು ಭವಿಷ್ಯದ ನೇತಾರರು. ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಉತ್ತಮ ವಾತಾವರಣ ಇರಬೇಕು. ಶಾಲೆಯಲ್ಲಿ ನಡೆಯುವ ಎಲ್ಲ ಅಟೋಟ, ಸ್ಪರ್ಧೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಸಂಪೂರ್ಣ ಅಧಿಕಾರವಿದೆ ಎಂದರು.
    18 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಮೇಲೆ ನಡೆಯುವ ಅಕ್ರಮ ದೌರ್ಜನ್ಯ, ಅವರ ಬಗ್ಗೆ ಅಶ್ಲೀಲವಾಗಿ ಮಾತನಾಡಿದರೆ ನೇರವಾಗಿ ವಿದ್ಯಾರ್ಥಿಗಳಿಗೆ ದೂರು ದಾಖಲಿಸುವ ಹಕ್ಕಿದೆ. 18 ವರ್ಷದ ಬಾಲಕಿಯರಿಗೆ ಲೈಂಗಿವಾಗಿ ದೌರ್ಜನ್ಯ ಮತ್ತು ಕಿರುಕುಳ ನೀಡಿದರೆ ಅತನ ವಿರುದ್ಧ ೆಕ್ಸೋ ಕಾಯ್ದೆಯಡಿ ದೂರು ದಾಖಲಿಸಿದರೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts