ಮಾಜಿ ಕ್ರಿಕೆಟಿಗ ಅನಿಲ್​ ಕುಂಬ್ಳೆಗೆ ವಿಶ್ವ ಚೇತನ ಪ್ರಶಸ್ತಿ ಪುರಸ್ಕಾರ

ಬೆಳಗಾವಿ: ಮಾಜಿ ಕ್ರಿಕೆಟಿಗ ಅನಿಲ್​ ಕುಂಬ್ಳೆ ಅವರಿಗೆ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ವಿಶ್ವ ಚೇತನ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ವಿಶಾಳಿ ಜಾತ್ರಾ ಮಹೋತ್ಸವ ನಿಮಿತ್ತ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಸ್ವಾಮೀಜಿ, ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಕಾಶಿ ಜಗದ್ಗುರುಗಳು ಅನಿಲ್​ ಕುಂಬ್ಳೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

Leave a Reply

Your email address will not be published. Required fields are marked *