More

    ಕ್ರಿಕೆಟ್ ಬೆಟ್ಟಿಂಗ್, ಮೂವರ ಬಂಧನ

    ಮೈಸೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ನಗರ ಅಪರಾಧ ಪತ್ತೆ ದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 30,500 ರೂ. ನಗದು, 4 ಮೊಬೈಲ್ ವಶಪಡಿಸಿಕೊಂಡಿದ್ದಾರೆ.
    ಯರಗನಹಳ್ಳಿ ಗ್ರಾಮದ ಮನೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಇತ್ತೀಚೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ಸಮಯದಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಅವರಿಂದ 28,200 ರೂ., 2 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಅಲ್ಲದೆ ಮಾ.25ರಂದು ಎನ್.ಆರ್. ಮೊಹಲ್ಲಾದಲ್ಲಿನ ಮನೆ ಮೇಲೆ ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಒಬ್ಬನನ್ನು ಬಂಧಿಸಲಾಗಿದೆ. ಆತನಿಂದ 2,300 ರೂ ಮತ್ತು 2 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎನ್‌ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts