More

    ಮಾನಸಿಕ, ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ

    ವಿಜಯವಾಣಿ ಸುದ್ದಿಜಾಲ ಸರ್ಜಾಪುರ
    ಕ್ರೀಡೆಗಳು ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ರಾಜ್ಯ ಬಹುಜನ ಸಮಾಜ ಪಕ್ಷದ ಖಜಾಂಜಿ ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ ತಿಳಿಸಿದರು.
    ಸಮೀಪದ ದೊಮ್ಮಸಂದ್ರ ಗ್ರಾಮದಲ್ಲಿ ಸೂಪರ್ ಸಂಡೇ ಕ್ರಿಕೆಟರ್ಸ್‌ನಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
    ಇತ್ತೀಚಿನ ದಿನಗಳಲ್ಲಿ ಯುವಕ ಮತ್ತು ಯುವತಿಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಸಣ್ಣ ಪುಟ್ಟ ಸಮಸ್ಯೆಗಳಿಗೂ ಆತ್ಮಹತ್ಯೆಗೆ ಒಳಗಾಗುವುದನ್ನು ಕಾಣುತ್ತಿದ್ದೇವೆ. ನಿತ್ಯ ವ್ಯಾಯಾಮ, ಕ್ರೀಡೆ, ಯೋಗ, ಧ್ಯಾನ ಮುಂತಾದ ಉತ್ತಮ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಇಂತಹ ಸಮಸ್ಯೆಗಳಿಂದ ಹೊರಬರಬಹುದು ಎಂದರು.
    ಶಾಲಾ ಕಾಲೇಜುಗಳಲ್ಲಿ ಶಿಕ್ಷಣದ ಜತೆಗೆ ಕ್ರೀಡೆಗೆ ಉತ್ತೇಜನ ನೀಡಬೇಕು. ಸರ್ಕಾರಗಳು ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
    ಕ್ರಿಕೆಟ್ ಪಂದ್ಯದಲ್ಲಿ ಪ್ರಥಮ ಬಹುಮಾನ ಕೊಡತಿ ಗ್ರಾಮದ ತಂಡ ಹಾಗೂ ದ್ವಿತೀಯ ಬಹುಮಾನ ದೊಮ್ಮಸಂದ್ರದ ವಿನಾಯಕ ನಗರ ತಂಡ ಪಡೆದುಕೊಂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts