ಸಿನಿಮಾ

ಮ್ಯಾಚ್ ಫಿಕ್ಸಿಂಗ್ ಆರೋಪ: ಕ್ರಿಕೆಟಿಗನನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ ಐಸಿಸಿ

ದೆಹಲಿ: ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಕ್ರಿಕೆಟಿಗ ಡೆವೊನ್ ಥಾಮಸ್​ರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ತಿಳಿಸಿದೆ. ಡೆವೊನ್​ ಮೇಲೆ ಭ್ರಷ್ಟಾಚಾರ ನಿಗ್ರಹ ಸಂಹಿತೆಯ ಅಡಿಯಲ್ಲಿ ಏಳು ಆರೋಪಗಳನ್ನು ಹೊರಿಸಲಾಗಿದೆ.

ಇದನ್ನೂ ಓದಿ: ಕಂದಕಕ್ಕೆ ಉರುಳಿದ ವಾಹನ; ಸ್ಥಳದಲ್ಲೇ ಪ್ರಾಣ ಬಿಟ್ಟ 7 ಮಂದಿ ಕಾರ್ಮಿಕರು!

2021ರಲ್ಲಿ ಶ್ರೀಲಂಕಾದಲ್ಲಿ ನಡೆದ ಲಂಕಾ ಪ್ರೀಮಿಯರ್ ಲೀಗ್, ಕೆರಿಬಿಯನ್ ಪ್ರೀಮಿಯರ್ ಲೀಗ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದ T10 ಲೀಗ್‌ನಲ್ಲಿ ಮೋಸದಾಟದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳ ಹಿನ್ನೆಲೆ ಡೆವೊನ್​ರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.

ಈ ಆರೋಪಗಳಿಗೆ ಪ್ರತಿಕ್ರಿಯಿಸಲು ಡೆವೊನ್​ಗೆ ಮಂಗಳವಾರದಿಂದ 14 ದಿನಗಳ ಕಾಲಾವಧಿಯನ್ನು ನೀಡಲಾಗಿದ್ದು, ಈತ ವೆಸ್ಟ್​​ಇಂಡಿಸ್​ ಪರ ಒಂದು ಟೆಸ್ಟ್, 12 ಟಿ20 ಮತ್ತು 21 ಏಕದಿನ ಪಂದ್ಯಗಳನ್ನು ಆಡಿದ್ದಾನೆ.(ಏಜೆನ್ಸೀಸ್​)

Latest Posts

ಲೈಫ್‌ಸ್ಟೈಲ್