More

    ಮಂಗಳಮುಖಿ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ! ಐಸಿಸಿಯಿಂದ ಸ್ಪಷ್ಟನೆ…

    ಅಹಮದಾಬಾದ್: ಲಿಂಗ ಪರಿವರ್ತನೆ ಆದವರು ಅಥವಾ ಮಂಗಳಮುಖಿಯರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. ಪುರುಷರಾಗಿ ಪ್ರೌಢಾವಸ್ಥೆಗೆ ಬಂದವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆಯಾಗಿದ್ದರೂ ಮಹಿಳೆಯರೊಂದಿಗೆ ಕ್ರಿಕೆಟ್​ ಆಡುವಂತಿಲ್ಲ. ಆಟಗಾರ್ತಿಯರ ಸುರಕ್ಷತೆ ಮತ್ತು ಮಹಿಳಾ ಕ್ರಿಕೆಟ್​ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಸಿಸಿ ತಿಳಿಸಿದೆ.

    ಕ್ರೀಡೆಗೆ ಸಂಬಂಧಿಸಿದ ವಿವಿಧ ವ್ಯಕ್ತಿ&ಸಂಸ್ಥೆಗಳ ಜತೆಗೆ 9 ತಿಂಗಳ ಕಾಲ ಸಮಗ್ರ ಚರ್ಚೆ ನಡೆಸಿದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಹೊಸ ಲಿಂಗ ಅರ್ಹತೆಯ ನಿಯಮಾವಳಿಯನ್ನು ಜಾರಿಗೆ ತರಲು ಐಸಿಸಿ ಮಂಡಳಿ ಸಮ್ಮತಿಸಿದೆ. 2028ರ ಲಾಸ್​ ಏಂಜಲಿಸ್​ ಒಲಿಂಪಿಕ್ಸ್​ಗೆ ಟಿ20 ಕ್ರಿಕೆಟ್​ ಸೇರ್ಪಡೆಗೊಂಡಿರುವುದು ಕೂಡ ಐಸಿಸಿ ಶೀಘ್ರವಾಗಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ಕಾರಣವಾಗಿದೆ ಎನ್ನಲಾಗಿದೆ. ಕ್ರೀಡೆಯಲ್ಲಿ ಲಿಂಗ ಪರಿವರ್ತಿತರ ಪಾಲ್ಗೊಳ್ಳುವಿಕೆ ಕಳೆದ ಕೆಲ ವರ್ಷಗಳಿಂದ ಅತ್ಯಂತ ಚರ್ಚಾವಸ್ತುವಾಗಿದ್ದು, ಕ್ರಿಕೆಟ್​ ಕೂಡ ಈಗ ಒಲಿಂಪಿಕ್ಸ್​ ಕ್ರೀಡೆಯಾಗಿರುವುದರಿಂದ ಅದು ಈ ಬಗ್ಗೆ ಸ್ಪಷ್ಟ ನಿರ್ಧಾರವೊಂದನ್ನು ತೆಗೆದುಕೊಳ್ಳುವುದು ಅಗತ್ಯವಾಗಿತ್ತು. ಆದರೆ ದೇಶೀಯ ಕ್ರಿಕೆಟ್​ನಲ್ಲಿ ಲಿಂಗ ಪರಿವರ್ತಿತರಿಗೆ ಆಡಲು ಅವಕಾಶ ನೀಡುವ ಅಧಿಕಾರವನ್ನು ಐಸಿಸಿ, ಆಯಾ ದೇಶಗಳಿಗೆ ಬಿಟ್ಟಿದೆ.

    ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿದ ಮೊದಲ ಮಂಗಳಮುಖಿ ಎನಿಸಿದ್ದ ಕೆನಡದ ಡೇನಿಯಲ್​ ಮೆಕ್​ಗಹೇಗೆ ಇನ್ನು ಮಹಿಳಾ ಕ್ರಿಕೆಟ್​ನಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ. ಮೆಕ್​ಗಹೇ ಮಹಿಳಾ ಕ್ರಿಕೆಟ್​ನಲ್ಲಿ ಇದುವರೆಗೆ 6 ಪಂದ್ಯ ಆಡಿದ್ದು, 118 ರನ್​ ಬಾರಿಸಿದ್ದಾರೆ.

    ವಿಶ್ವಕಪ್​ ಸೋಲಿನ ಬಳಿಕವೂ ಭವಿಷ್ಯದ ಗುಟ್ಟು ಬಿಟ್ಟುಕೊಡದ ದ್ರಾವಿಡ್!​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts