AI ಮೂಲಕ ಅಶ್ಲೀಲ ವಿಡಿಯೋ ಸೃಷ್ಟಿಸಿ 50 ಕಾಲೇಜು ಹುಡುಗಿಯರಿಗೆ ಬ್ಲಾಕ್​ಮೇಲ್! ಸ್ಫೋಟಕ ಮಾಹಿತಿ ಬಯಲು

College Students

ಭೋಪಾಲ್: ಎಐ (ಕೃತಕ ಬುದ್ಧಿಮತ್ತೆ) ಮೂಲಕ ಸೃಷ್ಟಿಸಿದ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಂಡು ಹುಡುಗಿಯರನ್ನು ಬ್ಲಾಕ್​ಮೇಲ್ ಮಾಡುತ್ತಿರುವ ಪ್ರಕರಣವೊಂದು ಮಧ್ಯಪ್ರದೇಶದ ಜಬಲ್​ಪುರದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಎಐ ಅಶ್ಲೀಲ ವಿಡಿಯೋ ವಂಚನೆಗೆ ಇದುವರೆಗೆ 50ಕ್ಕೂ ಹೆಚ್ಚು ಹುಡುಗಿಯರು ಸಂತ್ರಸ್ತರಾಗಿದ್ದಾರೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ. ಪ್ರಕರಣದ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಆರೋಪಿಗಳು ತಾವು ಪೊಲೀಸರೆಂದು ಹೇಳಿಕೊಂಡು ಹುಡುಗಿಯರಿಗೆ ಬೆದರಿಕೆ ಹಾಕಿ ಹಣಕ್ಕೆ ವಸೂಲಿ ಮಾಡಿರುವುದು ತಿಳಿದುಬಂದಿದೆ.

ಪೊಲೀಸ್​ ಮೂಲಗಳ ಪ್ರಕಾರ, ಜಬಲ್​ಪುರದ ಕಾಲೇಜು ವಿದ್ಯಾರ್ಥಿನಿಯರನ್ನು ಎಐ ಮೂಲಕ ರಚಿಸಿದ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಲಾಗುತ್ತಿದೆ. ಘಟನೆಯ ಬಗ್ಗೆ ದೂರು ಸ್ವೀಕರಿಸಿದ ನಂತರ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಪ್ರತಾಪ್ ಸಿಂಗ್ ಅವರು ಎಸ್‌ಐಟಿ ರಚಿಸಿದ್ದಾರೆ. ಇದರ ನೇತೃತ್ವವನ್ನು ನಗರ ಪೊಲೀಸ್ ವರಿಷ್ಠಾಧಿಕಾರಿ (ಕೊತ್ವಾಲಿ) ಆರ್.ಕೆ.ಶಿವ ವಹಿಸಲಿದ್ದಾರೆ. ಅಪರಾಧ ವಿಭಾಗ, ಸೈಬರ್ ಸೆಲ್ ಮತ್ತು ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ವಿಶೇಷ ತನಿಖಾ ತಂಡದ ಭಾಗವಾಗಿದ್ದಾರೆ.

ಆರೋಪಿಗಳು ಪೊಲೀಸ್ ಅಧಿಕಾರಿ ವಿಕ್ರಮ್ ಗೋಸ್ವಾಮಿ ಹೆಸರಿನಲ್ಲಿ ಹುಡುಗಿಯರಿಗೆ ಬೆದರಿಕೆ ಹಾಕಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಬಳಸಿ ಅಶ್ಲೀಲ ವಿಡಿಯೋ ರಚಿಸಿ, ಹುಡುಗಿಯರ ಮೊಬೈಲ್​ಗೆ ಕಳುಹಿಸಿದ್ದಾರೆ. ಅಲ್ಲದೆ, ಪೊಲೀಸ್ ಕೇಸ್​ನಲ್ಲಿ ಸಿಲುಕಿಸಿ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿ, ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈವರೆಗೆ ಇಬ್ಬರು ಹುಡುಗಿಯರು ಆರೋಪಿಗೆ 2000-3000 ರೂಪಾಯಿ ನೀಡಿದ್ದಾರೆ. ಆರೋಪಿಗಳಿಗೆ ಈ ವಿದ್ಯಾರ್ಥಿನಿಯರ ನಂಬರ್ ಹೇಗೆ ಸಿಕ್ಕಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 50 ಹುಡುಗಿಯರು ಸಂತ್ರಸ್ತೆಯರಾಗಿದ್ದಾರೆ. ಆದರೆ, ಇದುವರೆಗೆ ಕೇವಲ ಮೂರು ದೂರುಗಳು ಮಾತ್ರ ಬಂದಿವೆ. ಘಟನೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಜಬಲ್‌ಪುರದಲ್ಲಿ ಪ್ರತಿಭಟನೆ ನಡೆಸಿವೆ. ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳು ಯತ್ನಿಸುತ್ತಿವೆ. ಸದ್ಯದಲ್ಲೇ ಆರೋಪಿಗಳು ಸಿಕ್ಕಿಬೀಳಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

ನೀರಜ್​-ಮನು ಭಾಕರ್​ ಪ್ರೀತಿಯ ಬಲೆಯಲ್ಲಿ ಬಿದ್ದಿರುವುದು ನಿಜ! ಇದಕ್ಕಿಂತ ಸಾಕ್ಷಿ ಬೇಕಾ ಅಂದ್ರು ನೆಟ್ಟಿಗರು

ಸೆ. 29ಕ್ಕೆ ಬಿಗ್​ಬಾಸ್​ ಸೀಸನ್ 11​ ಆರಂಭ: ಈ ಬಾರಿ ಡೊಡ್ಮನೆ ಪ್ರವೇಶಿಸುವವರು ಯಾರು? ಇಲ್ಲಿದೆ ಸಂಭವನೀಯ ಪಟ್ಟಿ​…

ನಿಮ್ಮ ಅಂಗೈನಲ್ಲಿ ಈ ರೀತಿ ತ್ರಿಕೋನ ಚಿಹ್ನೆ ಇದೆಯಾ? ಇದ್ರೆ ಏನಾಗುತ್ತೆ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…