ಕಾಫಿ ತೋಟದಲ್ಲಿ ಪತ್ತೆಯಾಯ್ತು ಮಹಿಳೆಯ ಕಾಲು! ತನಿಖೆ ಚುರುಕುಗೊಳಿಸಿದ ಪೊಲೀಸರು

Kodagu
Published on

ಕೊಡಗು: ಕಾಫಿ ತೋಟವೊಂದರಲ್ಲಿ ಮಹಿಳೆಯೊಬ್ಬರು ಕಾಲು ಪತ್ತೆಯಾಗಿದ್ದು, ಇದೀಗ ಸ್ಥಳೀಯರಲ್ಲಿ ಸಾಕಷ್ಟು ಅನುಮಾನದ ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಾಗಿದೆ. ಸದ್ಯ ಕಾಲು ಪತ್ತೆಯಾಗಿರುವ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿರುವ ಕಾಫಿ ತೋಟಕ್ಕೆ ಎಸ್​ಪಿ ಕೆ.ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೇ 16ರಂದು ಚೋಂದು ಎಂಬ ಮಹಿಳೆ ನಾಪತ್ತೆಯಾಗಿದ್ದರು. ಇದಾಗಿ ನಾಲ್ಕು ದಿನಗಳ ಬಳಿಕ ಕಾಫಿ ತೋಟದಲ್ಲಿ ಮಹಿಳೆಯ ಕಾಲು ಹಾಗೂ ಬಟ್ಟೆ ಪತ್ತೆಯಾಗಿದೆ. ಈ ಬಗ್ಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಹುಲಿ ಅಥವಾ ಬೇರೆ ಯಾವುದಾದರು ಕಾಡು ಪ್ರಾಣಿ ಮಹಿಳೆಯನ್ನು ತಿಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಮೃತ ಮಹಿಳೆಯ ಪತಿ ಅಪ್ಪಿ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಹಿಳೆ ಚೋಂದು ಹತ್ಯೆಯಾಗಿರುವ ಸಾಧ್ಯತೆ ಇದ್ದು, ಕೊಲೆ ಆಯಾಮದಲ್ಲೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ದುಷ್ಕರ್ಮಿಗಳ ಅಟ್ಟಹಾಸ; ಗುಂಡೇಟಿಗೆ ಬಲಿಯಾದ ಹೆಣ್ಣಾನೆ

ಕೊಡಗು: ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಾಳುಗೋಡು ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಸುಮಾರು 18 ವರ್ಷದ ಹೆಣ್ಣಾನೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net