More

    ವಿಷ ಸೇವಿಸಿ ಸ್ಲೀಪರ್ ಕೋಚ್ ಬಸ್​​ನಲ್ಲಿ ಪ್ರಯಾಣಿಸಿದ ಪ್ರೇಮಿಗಳು!

    ಹಾವೇರಿ: ಪ್ರೇಮಿಗಳು ವಿಷ ಸೇವಿಸಿ ಸ್ಲೀಪರ್ ಕೋಚ್ ಬಸ್​ನಲ್ಲಿ ಪ್ರಯಾಣಿಸಿದ್ದು, ಯುವತಿ ಸಾವನ್ನಪ್ಪಿದ್ದಾಳೆ. ಯುವಕ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬೆಂಗಳೂರು ಮೂಲದ ಹೇಮಾ ರಾಮಕೃಷ್ಣಪ್ಪ(20) ಮೃತ ಯುವತಿ. ಈ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್​ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ.

    ಮದುವೆ ಆಗಲು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳು ವಿಷ ಕುಡಿದು ಸ್ಲೀಪರ್ ಕೋಚ್ ಬಸ್​ನಲ್ಲಿ ನಿದ್ರಿಸಿದ್ದಾರೆ. ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಹೇಮಾ ಹಾಗೂ ಬಾಗಲಕೋಟೆ ಮೂಲದ ಯುವಕ ಅಖಿಲ್ ಎಂಬಾತ ಪ್ರೀತಿಸುತ್ತಿದ್ದರು. ಮದುವೆಗೆ ಮನೆಯವರಿಂದ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಮುಂದಾಗಿದ್ದರು.

    ಇದನ್ನೂ ಓದಿ: ನೀವು ದಿನಚರಿ ಹೇಗೆ ಪ್ರಾರಂಭಿಸುತ್ತೀರಿ? ಸ್ಮೃತಿ ಇರಾನಿ ನೀಡಿದ ಸಲಹೆ ಹೀಗಿದೆ…

    ‘ಸಾಯೋದಕ್ಕೂ ಮುಂಚೆ ನಮಗೆ ಮದುವೆಯಾಗಲು ನೀವು ಒಪ್ಪಿಗೆ ಕೊಡುವುದಿಲ್ಲ ಎನ್ನುವುದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗುತ್ತಿದ್ದೇವೆ’ ಎಂದು ಯುವತಿ ಮನೆಗೆ ಫೋನ್ ಮಾಡಿ ಹೇಳಿದ್ದಾಳೆ. ಬಳಿಕ ಇಬ್ಬರೂ ವಿಷ ಸೇವಿಸಿದ್ದು, ದುರಾದೃಷ್ಟವಶಾತ್ ಹೇಮಾ ಮೃತ ಪಟ್ಟಿದ್ದಾಳೆ. ಪ್ರಜ್ಞೆ ಕಳೆದುಕೊಂಡಿದ್ದ ಅಖಿಲ್​ನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಸದ್ಯ ಯುವಕ ಚೇತರಿಸಿಕೊಂಡಿದ್ದಾನೆ. 5 ದಿನಗಳ ಬಳಿಕ ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.

    ಊಟಕ್ಕೆಂದು ಬಸ್​ ನಿಲ್ಲಿಸಿದಾಗ ವಿಷದ ವಾಸನೆ ಬರುತ್ತಿರುವುದನ್ನು ಗಮನಿಸಿ ಬಸ್​ನಲ್ಲಿದ್ದವರು ಅನುಮಾನ ಬಂದು ಪರಿಶೀಲಿಸಿದಾಗ ಯುವಕ ಮತ್ತು ಯುವತಿ ಅಸ್ವಸ್ಥರಾಗಿದ್ದರು. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts