More

    ಸುಜ್ಞಾನದ ಕೊರತೆಯಿಂದ ಅಪರಾಧ ಕೃತ್ಯಗಳು ಹೆಚ್ಚು

    ಪಾಂಡವಪುರ: ತಾಲೂಕಿನ ಬೇಬಿ ಗ್ರಾಮದ ಶ್ರೀ ದುದರ್ಂಡೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಗುರುವಾರ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

    ಮಠದ ಆವರಣದಲ್ಲಿರುವ ಲಿಂಗೈಕ್ಯ ಮರಿದೇವರು ಗದ್ದುಗೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪೀಠಾಧ್ಯಕ್ಷ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಆಶೀರ್ವಚನ ನೀಡಿ, ಜನರಲ್ಲಿ ಸುಜ್ಞಾನದ ಕೊರತೆಯಿಂದ ದೇಶದಲ್ಲಿ ಕ್ರೋಧ, ಕೊಲೆ, ಸುಲಿಗೆ, ಹಲ್ಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇಂತಹ ಕೃತ್ಯಗಳಿಗೆ ಮುಕ್ತಿ ನೀಡಬೇಕಾದರೆ ನೀತಿ ಶಿಕ್ಷಣದ ಅವಶ್ಯಕತೆ ಇದೆ ಎಂದು ಅಭಿಪ್ರಾಯಿಸಿದರು.

    ದೇಹವನ್ನು ಪ್ರೀತಿಸುವುದಕ್ಕಿಂತ ದೇಶವನ್ನು ಪ್ರೀತಿಸುವ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಿದೆ. ನಮ್ಮ ಸುತ್ತಮುತ್ತಲಿನ ಪರಿಸರ, ಕಲುಷಿತ ರಾಜಕಾರಣ, ಪಾಲಕರ ಅಜಾಗರುಕತೆ ಮತ್ತು ತಾತ್ಸಾರ ಮನೋಭಾವದಿಂದ ಮಕ್ಕಳು ದಾರಿ ತಪ್ಪಿ ಅಪರಾಧ ಕೃತ್ಯಗಳತ್ತ ವಾಲುತ್ತಿದ್ದಾರೆ. ಪಾಲಕರು ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು ಎಂದು ಸಲಹೆ ನೀಡಿದರು.

    ಮಠದ ಕಾರ್ಯದರ್ಶಿ ಟಿ.ಪಿ.ಶಿವಕುಮಾರ್, ಡಿಎಂಎಸ್ ಶಾಲೆ ಮುಖ್ಯಶಿಕ್ಷಕ ಜಗದೀಶ್, ಭಕ್ತರಾದ ದ್ಯಾವಣ್ಣ ರೇವಣ್ಣನವರ್, ಮಲ್ಲನಗೌಡ ಪಾಟೀಲ, ವೀರಭದ್ರ, ಎಂ.ಗಂಗಾಧರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts