More

    ಸಿ.ಟಿ. ರವಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದ ಹೈಕೋರ್ಟ್; ದೂರು ದಾಖಲು ಪ್ರಕ್ರಿಯೆಯಲ್ಲೇ ಕಾನೂನು ಉಲ್ಲಂಘನೆ

    ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣ ರದ್ದು ಕೋರಿ ಸಿ.ಟಿ. ರವಿ ಮತ್ತವರ ಮೂವರು ಬೆಂಬಲಿಗರು ಸಲ್ಲಿಸಿದ್ದ ಅರ್ಜಿಗಳನ್ನು ಸೋಮವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

    ಪ್ರಕರಣದ ದೂರುದಾರರಾಗಿರುವ ಚುನಾವಣಾಧಿಕಾರಿ, ನಿಯಮಗಳ ಪ್ರಕಾರ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಬೇಕಿತ್ತು. ಆದರೆ, ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರು ದಾಖಲಿಸುವ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದೇ ವೇಳೆ, ದೂರುದಾರರು ಕಾನೂನು ಪ್ರಕಾರ ಹೊಸದಾಗಿ ದೂರು ದಾಖಲಿಸಲು ಸ್ವತಂತ್ರರಾಗಿದ್ದಾರೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

    2019ರ ಏ.7ರಂದು ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಮತ್ತವರ ಬೆಂಬಲಿಗರು ಸಕಲೇಶಪುರ ತಾಲೂಕಿನ ಬಾಗೇಹಳ್ಳಿಯಲ್ಲಿ ಅಂದಾಜು 80ರಿಂದ 100 ಕಾರ್ಯಕರ್ತರನ್ನು ಸೇರಿಸಿ ಸಭೆ ನಡೆಸಿದ್ದರು. ಆದರೆ, ಸಭೆ ನಡೆಸಲು ಚುನಾವಣಾ ಆಯೋಗದಿಂದ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚನಾವಣಾಧಿಕಾರಿ ಸಕಲೇಶಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿತ್ತು.

    ಜೂ. 21ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕರೊನಾ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

    ಕದಿಯುವಾಗಲೇ ಸಿಕ್ಕಿಬಿದ್ದ ಎಳನೀರು ಕಳ್ಳ; ಮಾರಾಟಗಾರರೇ ಕಾದು ಹಿಡಿದು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ರು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts