More

    ಗೃಹಲಕ್ಷ್ಮೀ ಯೋಜನೆಯಲ್ಲಿ ದುಡ್ಡು ಪಡೆದರೆ ಕ್ರಿಮಿನಲ್ ಪ್ರಕರಣ: ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ 

    ಬೆಳಗಾವಿ: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಯಾರೇ ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆ ಅಂತವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
    ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಪ್ಪು ಮಾಡಿದ 3 ಜನರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ. ಸರ್ಕಾರವಾಗಲಿ, ಇಲಾಖೆಯಾಗಲಿ ಸುಮ್ಮನೆ ಕುಳಿತಿಲ್ಲ. ಅಂತವರ ಮೇಲೆ ಕ್ರಿಮಿನಲ್ ಪ್ರಕರಣ ಸಹ ದಾಖಲಿಸಲಾಗುವುದು ಎಂದರು.
    ತಹಸಿಲ್ದಾರ್, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಯಾರಿಗೇ ಆಗಲಿ ಹಣಪಡೆಯುವುದು ಗಮನಕ್ಕೆ ಬಂದರೆ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು. ಅಸಡ್ಡೆ ಮಾಡಿದರೆ ಅವರೂ ಜವಾಬ್ದಾರರಾಗುತ್ತಾರೆ ಎಂದರು.
    ಅಪ್ ಲೋಡ್ ಮಾಡುವವರಿಗೆ ಸರ್ಕಾರದಿಂದಲೇ ಪ್ರತಿ ಅರ್ಜಿಗೆ 12 ರೂ. ನೀಡಲಾಗುತ್ತಿದೆ. 10 ರೂ. ಅಪ್ ಲೋಡ್ ಮಾಡಲು, 2 ರೂ. ಪ್ರಿಂಟ್ ಔಟ್ ಕೊಡಲು ನೀಡಲಾಗುತ್ತಿದೆ. ಹಾಗಾಗಿ ಜನರು ಯಾರಿಗೂ ದುಡ್ಡು ಕೊಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts