ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

Latest News

ನಾಮಪತ್ರ ವಾಪಸ್​ ಪಡೆಯಲು ಇಂದು ಕೊನೆ ದಿನ; ಶರತ್​ ಬಚ್ಚೇಗೌಡ ನಿಲುವೇನು?

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿರುವ ಉಪ ಚುನಾವಣೆ ದಿನದಿನಕ್ಕೂ ರಂಗೇರುತ್ತಿದೆ. ರೆಬೆಲ್​ ಶಾಸಕರು ಬಿಜೆಪಿ ಟಿಕೆಟ್​ ಪಡೆದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ ಬಿದ್ದ ಕಂತೆ ಕಂತೆ ನೋಟುಗಳು!

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ...

PHOTOS| ಅಭಿಮಾನಿಗಳನ್ನು ಖುದ್ದಾಗಿ ಮದುವೆಗೆ ಆಮಂತ್ರಿಸಿದ ಧ್ರುವ ಸರ್ಜಾ ನಡೆಗೆ ಮೆಚ್ಚುಗೆಯ ಮಹಾಪೂರ!

ಬೆಂಗಳೂರು: ನಟನೊಬ್ಬ ಸಿನಿಮಾ ರಂಗದಲ್ಲಿ ಯಶಸ್ಸು ಕಾಣಲು ಶ್ರಮದ ಜತೆಗೆ ಅಭಿಮಾನಿಗಳ ಅಭಿಮಾನ ಪ್ರಮುಖ ಕಾರಣವಾಗಿರುತ್ತದೆ. ಹೀಗಾಗಿಯೇ ಡಾ. ರಾಜ್​ಕುಮಾರ್​ ಅಭಿಮಾನಿಗಳನ್ನು ದೇವರು...

ಅನಾಮಧೇಯ ದೂರುಗಳೆಲ್ಲ ಸುಳ್ಳಲ್ಲ: ಮೂಗರ್ಜಿ ತನಿಖೆ ಬೇಡವೆಂಬ ಸರ್ಕಾರದ ಆದೇಶಕ್ಕೆ ಅಸಮಾಧಾನ

| ಯಂಕಣ್ಣ ಸಾಗರ್ ಬೆಂಗಳೂರು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಬರುವ ಅನಾಮಧೇಯ ಹಾಗೂ ಮೂಗರ್ಜಿ ದೂರುಗಳ ತನಿಖೆ ನಡೆಸದಂತೆ ರಾಜ್ಯ ಸರ್ಕಾರದ...

ಅನಾಥ ಶಿಶುವೀಗ ಮಹಾವೀರ: ಜೈನ್ ಆಸ್ಪತ್ರೆ ವೈದ್ಯರಿಂದ ನಾಮಕರಣ, 14ರಂದು ಸಿಕ್ಕಿದ ಮಗು

ಬೆಂಗಳೂರು: ವಸಂತನಗರದ ಮಸೀದಿ ಬಳಿ ಅನಾಥವಾಗಿ ದೊರೆತ ನವಜಾತ ಶಿಶುವಿಗೆ ಭಗವಾನ್ ಮಹಾವೀರ ಜೈನ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದು, ಮಹಾವೀರ ಎಂದು...

< ಪ್ರೇಷಿತರ ಪಾದ ತೊಳೆದ ಮಂಗಳೂರು, ಉಡುಪಿ ಬಿಷಪ್‌ಗಳು, ಧರ್ಮಗುರುಗಳು * ಯೇಸು ಕ್ರಿಸ್ತರ ಕೊನೆಯ ಭೋಜನ ಸ್ಮರಣೆ>

ಮಂಗಳೂರು/ಉಡುಪಿ: ಯೇಸು ಸ್ವಾಮಿ ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪು ಸಾರುವ ಪವಿತ್ರ ಗುರುವಾರ (ಮೊಂಡಿ ಥರ್ಸ್‌ಡೇ)ವನ್ನು ಕ್ರೈಸ್ತರು ಭಕ್ತಿ ಶ್ರದ್ಧೆಯಿಂದ ಆಚರಿಸಿದರು.

ಮಂಗಳೂರು ನಗರದ ರೊಜಾರಿಯೊ ಕೆಥೆಡ್ರಲ್‌ನಲ್ಲಿ ಗುರುವಾರ ಸಾಯಂಕಾಲ ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನಾ ಬಲಿ ಪೂಜೆ ಮತ್ತು ಪರಮ ಪ್ರಸಾದದ ಮೆರವಣಿಗೆಯ ನೇತೃತ್ವ ವಹಿಸಿದ್ದರು. ಕೆಥೆಡ್ರಲ್‌ನ ರೆಕ್ಟರ್ ಾ.ಜೆ.ಬಿ. ಕ್ರಾಸ್ತಾ ಪರಮ ಪ್ರಸಾದದ ಆರಾಧನೆ ನಡೆಸಿಕೊಟ್ಟರು. ರೊಸಾರಿಯೊ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಾ.ವಿಕ್ಟರ್ ಡಿಸೋಜ ಪ್ರವಚನ ನೀಡಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಾ.ರೊಕಿ ಫರ್ನಾಂಡಿಸ್, ಕೆಥೆಡ್ರಲ್‌ನ ಸಹಾಯಕ ಗುರು ಾ.್ಲೇವಿಯನ್ ಲೋಬೊ, ಮೈನರ್ ಸೆಮಿನರಿಯ ರೆಕ್ಟರ್ ಾ.ಅನಿಲ್ ಫರ್ನಾಂಡಿಸ್ ಉಪಸ್ಥಿತರಿದ್ದರು.

ಯೇಸು ಕ್ರಿಸ್ತರು ತಾನು ಶಿಲುಬೆಗೇರುವ ಮುನ್ನ ಪವಿತ್ರ ಗುರುವಾರದಂದು ತನ್ನ 12 ಶಿಷ್ಯರೊಂದಿಗೆ ಸೇರಿ ಕೊನೆಯ ಭೋಜನ ನಡೆಸಿದ್ದರು. ಈ ವೇಳೆಯನ್ನು ತನ್ನ ಶಿಷ್ಯರ ಪಾದಗಳನ್ನು ತೊಳೆಯುವುದರ ಮೂಲಕ ತನ್ನ ಶಿಷ್ಯರಿಗೆ ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು. ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದುದರ ಸಂಕೇತವಾಗಿ ಕೆಥೆಡ್ರಲ್‌ನಲ್ಲಿ ಬಿಷಪರು ಹಾಗೂ ಇತರ ಚರ್ಚ್‌ಗಳಲ್ಲಿ ಸ್ಧಳೀಯ ಧರ್ಮಗುರುಗಳು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು. ಇದರಲ್ಲಿ ಶೇ.50ರಷ್ಟು ಮಹಿಳೆಯರಿದ್ದರು. ದಾದಿಯರು, ರೋಗಿಗಳು, ಯುವಕರು, ವೃದ್ಧರು ಧಾರ್ಮಿಕ ವ್ಯಕ್ತಿಗಳಿಗೂ, ಪ್ರಾತಿನಿಧ್ಯ ನೀಡಲಾಗಿತ್ತು.
ಚರ್ಚ್‌ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರುದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ನಡೆದವು.

ಉಡುಪಿ ಕಾರ್ಯಕ್ರಮ: ಉಡುಪಿ ರೋಮನ್ ಕ್ಯಾಥೊಲಿಕ್ ಧರ್ಮಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ನಡೆಯಿತು.
ಧರ್ಮಾಧ್ಯಕ್ಷರು 12 ಮಂದಿ ಪ್ರೇಷಿತರ (ವಿಶ್ವಾಸಿಗಳು) ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರ ಪ್ರೀತಿಯ ಸಂದೇಶ ನೀಡಿದರು. ಮೂರು ವರ್ಷಗಳಿಂದ ಪೋಪ್ ಫ್ರಾನ್ಸಿಸ್ ಅವರು ಪಾದ ತೊಳೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರ ಪಾದ ತೊಳೆಯಲು ಅವಕಾಶ ಕಲ್ಪಿಸಿ ಆದೇಶ ನೀಡಿದ್ದರು. ಈ ಬಾರಿಯೂ ಅದೇ ಸಂಪ್ರದಾಯವನ್ನು ಮುಂದುವರಿಸಿದ್ದು, ಮಹಿಳೆಯರ ಸಹಿತ 12 ಪ್ರೇಷಿತರ ಪಾದಗಳನ್ನು ಧರ್ಮಾಧ್ಯಕ್ಷರು ಸೇರಿದಂತೆ ಧರ್ಮಪ್ರಾಂತ್ಯದ ಎಲ್ಲ ಚರ್ಚ್‌ಗಳಲ್ಲಿ ತೊಳೆಯಲಾಯಿತು.
ಕೆಥೆಡ್ರಲ್‌ನ ಪ್ರಧಾನ ಧರ್ಮಗುರು ಡಾ.ಲೋರೆನ್ಸ್ ಡಿಸೋಜ, ಸಹಾಯಕ ಧರ್ಮಗುರು ಕೆನ್ಯೂಟ್ ಹಾಗೂ ಇತರರು ಉಪಸ್ಥಿತರಿದ್ದರು.

ಇಂದು ಗುಡ್‌ಫ್ರೈಡೇ: ಪವಿತ್ರ ಗುರುವಾರದ ಬಳಿಕ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನವಾಗಿರುವ ಶುಕ್ರವಾರವನ್ನು ಗುಡ್ ಫ್ರೈಡೇಯಾಗಿ (ಶುಭ ಶುಕ್ರವಾರ)ವನ್ನಾಗಿ ಆಚರಿಸಲಾಗುತ್ತದೆ. ಈ ದಿನ ಜಗತ್ತಿನಾದ್ಯಂತದ ಕ್ರೈಸ್ತ ದೇವಾಲಯಗಳಲ್ಲಿ ಬಲಿಪೂಜೆಗಳು ಇರುವುದಿಲ್ಲ. ಯೇಸು ಕ್ರಿಸ್ತರು ಶಿಲುಬೆಗೇರುವ ಮುನ್ನ ಶಿಲುಬೆಯನ್ನು ಹೊತ್ತು ಸಾಗಿದ ಘಟನಾವಳಿಯನ್ನು ಸ್ಮರಿಸಿ ‘ವೇ ಆ್ ದಿ ಕ್ರಾಸ್’ (ಶಿಲುಬೆಯ ಹಾದಿ) ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಗುತ್ತದೆ. ಧ್ಯಾನ, ಉಪವಾಸ ಮಾಡಲಾಗುತ್ತದೆ.

ಪರಮ ಪ್ರಸಾದದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, 12 ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದ ಯೇಸು ಕ್ರಿಸ್ತರು ‘ನಾನು ನಿಮ್ಮನ್ನು ಪ್ರೀತಿಸಿದಂತೆ ನೀವು ಪರಸ್ಪರ ಪ್ರೀತಿಸಬೇಕು’ ಎಂಬ ಹೊಸ ಉಪದೇಶ ನೀಡಿದ್ದರು. ಹಾಗಾಗಿ ಕ್ರೈಸ್ತ ಧರ್ಮಸಭೆಯ ಉಗಮ ಈ ದಿನದಂದು ಆಯಿತೆಂದು ಹೇಳಬಹುದು.
– ಡಾ.ಪೀಟರ್ ಪಾವ್ಲ್ ಸಲ್ಡಾನಾ, ಮಂಗಳೂರು ಬಿಷಪ್

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...