ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

< ಪ್ರೇಷಿತರ ಪಾದ ತೊಳೆದ ಮಂಗಳೂರು, ಉಡುಪಿ ಬಿಷಪ್‌ಗಳು, ಧರ್ಮಗುರುಗಳು * ಯೇಸು ಕ್ರಿಸ್ತರ ಕೊನೆಯ ಭೋಜನ ಸ್ಮರಣೆ>

ಮಂಗಳೂರು/ಉಡುಪಿ: ಯೇಸು ಸ್ವಾಮಿ ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪು ಸಾರುವ ಪವಿತ್ರ ಗುರುವಾರ (ಮೊಂಡಿ ಥರ್ಸ್‌ಡೇ)ವನ್ನು ಕ್ರೈಸ್ತರು ಭಕ್ತಿ ಶ್ರದ್ಧೆಯಿಂದ ಆಚರಿಸಿದರು.

ಮಂಗಳೂರು ನಗರದ ರೊಜಾರಿಯೊ ಕೆಥೆಡ್ರಲ್‌ನಲ್ಲಿ ಗುರುವಾರ ಸಾಯಂಕಾಲ ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನಾ ಬಲಿ ಪೂಜೆ ಮತ್ತು ಪರಮ ಪ್ರಸಾದದ ಮೆರವಣಿಗೆಯ ನೇತೃತ್ವ ವಹಿಸಿದ್ದರು. ಕೆಥೆಡ್ರಲ್‌ನ ರೆಕ್ಟರ್ ಾ.ಜೆ.ಬಿ. ಕ್ರಾಸ್ತಾ ಪರಮ ಪ್ರಸಾದದ ಆರಾಧನೆ ನಡೆಸಿಕೊಟ್ಟರು. ರೊಸಾರಿಯೊ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಾ.ವಿಕ್ಟರ್ ಡಿಸೋಜ ಪ್ರವಚನ ನೀಡಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಾ.ರೊಕಿ ಫರ್ನಾಂಡಿಸ್, ಕೆಥೆಡ್ರಲ್‌ನ ಸಹಾಯಕ ಗುರು ಾ.್ಲೇವಿಯನ್ ಲೋಬೊ, ಮೈನರ್ ಸೆಮಿನರಿಯ ರೆಕ್ಟರ್ ಾ.ಅನಿಲ್ ಫರ್ನಾಂಡಿಸ್ ಉಪಸ್ಥಿತರಿದ್ದರು.

ಯೇಸು ಕ್ರಿಸ್ತರು ತಾನು ಶಿಲುಬೆಗೇರುವ ಮುನ್ನ ಪವಿತ್ರ ಗುರುವಾರದಂದು ತನ್ನ 12 ಶಿಷ್ಯರೊಂದಿಗೆ ಸೇರಿ ಕೊನೆಯ ಭೋಜನ ನಡೆಸಿದ್ದರು. ಈ ವೇಳೆಯನ್ನು ತನ್ನ ಶಿಷ್ಯರ ಪಾದಗಳನ್ನು ತೊಳೆಯುವುದರ ಮೂಲಕ ತನ್ನ ಶಿಷ್ಯರಿಗೆ ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು. ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದುದರ ಸಂಕೇತವಾಗಿ ಕೆಥೆಡ್ರಲ್‌ನಲ್ಲಿ ಬಿಷಪರು ಹಾಗೂ ಇತರ ಚರ್ಚ್‌ಗಳಲ್ಲಿ ಸ್ಧಳೀಯ ಧರ್ಮಗುರುಗಳು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು. ಇದರಲ್ಲಿ ಶೇ.50ರಷ್ಟು ಮಹಿಳೆಯರಿದ್ದರು. ದಾದಿಯರು, ರೋಗಿಗಳು, ಯುವಕರು, ವೃದ್ಧರು ಧಾರ್ಮಿಕ ವ್ಯಕ್ತಿಗಳಿಗೂ, ಪ್ರಾತಿನಿಧ್ಯ ನೀಡಲಾಗಿತ್ತು.
ಚರ್ಚ್‌ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರುದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ನಡೆದವು.

ಉಡುಪಿ ಕಾರ್ಯಕ್ರಮ: ಉಡುಪಿ ರೋಮನ್ ಕ್ಯಾಥೊಲಿಕ್ ಧರ್ಮಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ನಡೆಯಿತು.
ಧರ್ಮಾಧ್ಯಕ್ಷರು 12 ಮಂದಿ ಪ್ರೇಷಿತರ (ವಿಶ್ವಾಸಿಗಳು) ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರ ಪ್ರೀತಿಯ ಸಂದೇಶ ನೀಡಿದರು. ಮೂರು ವರ್ಷಗಳಿಂದ ಪೋಪ್ ಫ್ರಾನ್ಸಿಸ್ ಅವರು ಪಾದ ತೊಳೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರ ಪಾದ ತೊಳೆಯಲು ಅವಕಾಶ ಕಲ್ಪಿಸಿ ಆದೇಶ ನೀಡಿದ್ದರು. ಈ ಬಾರಿಯೂ ಅದೇ ಸಂಪ್ರದಾಯವನ್ನು ಮುಂದುವರಿಸಿದ್ದು, ಮಹಿಳೆಯರ ಸಹಿತ 12 ಪ್ರೇಷಿತರ ಪಾದಗಳನ್ನು ಧರ್ಮಾಧ್ಯಕ್ಷರು ಸೇರಿದಂತೆ ಧರ್ಮಪ್ರಾಂತ್ಯದ ಎಲ್ಲ ಚರ್ಚ್‌ಗಳಲ್ಲಿ ತೊಳೆಯಲಾಯಿತು.
ಕೆಥೆಡ್ರಲ್‌ನ ಪ್ರಧಾನ ಧರ್ಮಗುರು ಡಾ.ಲೋರೆನ್ಸ್ ಡಿಸೋಜ, ಸಹಾಯಕ ಧರ್ಮಗುರು ಕೆನ್ಯೂಟ್ ಹಾಗೂ ಇತರರು ಉಪಸ್ಥಿತರಿದ್ದರು.

ಇಂದು ಗುಡ್‌ಫ್ರೈಡೇ: ಪವಿತ್ರ ಗುರುವಾರದ ಬಳಿಕ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನವಾಗಿರುವ ಶುಕ್ರವಾರವನ್ನು ಗುಡ್ ಫ್ರೈಡೇಯಾಗಿ (ಶುಭ ಶುಕ್ರವಾರ)ವನ್ನಾಗಿ ಆಚರಿಸಲಾಗುತ್ತದೆ. ಈ ದಿನ ಜಗತ್ತಿನಾದ್ಯಂತದ ಕ್ರೈಸ್ತ ದೇವಾಲಯಗಳಲ್ಲಿ ಬಲಿಪೂಜೆಗಳು ಇರುವುದಿಲ್ಲ. ಯೇಸು ಕ್ರಿಸ್ತರು ಶಿಲುಬೆಗೇರುವ ಮುನ್ನ ಶಿಲುಬೆಯನ್ನು ಹೊತ್ತು ಸಾಗಿದ ಘಟನಾವಳಿಯನ್ನು ಸ್ಮರಿಸಿ ‘ವೇ ಆ್ ದಿ ಕ್ರಾಸ್’ (ಶಿಲುಬೆಯ ಹಾದಿ) ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಗುತ್ತದೆ. ಧ್ಯಾನ, ಉಪವಾಸ ಮಾಡಲಾಗುತ್ತದೆ.

ಪರಮ ಪ್ರಸಾದದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, 12 ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದ ಯೇಸು ಕ್ರಿಸ್ತರು ‘ನಾನು ನಿಮ್ಮನ್ನು ಪ್ರೀತಿಸಿದಂತೆ ನೀವು ಪರಸ್ಪರ ಪ್ರೀತಿಸಬೇಕು’ ಎಂಬ ಹೊಸ ಉಪದೇಶ ನೀಡಿದ್ದರು. ಹಾಗಾಗಿ ಕ್ರೈಸ್ತ ಧರ್ಮಸಭೆಯ ಉಗಮ ಈ ದಿನದಂದು ಆಯಿತೆಂದು ಹೇಳಬಹುದು.
– ಡಾ.ಪೀಟರ್ ಪಾವ್ಲ್ ಸಲ್ಡಾನಾ, ಮಂಗಳೂರು ಬಿಷಪ್