More

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ, ರಾಹುಲ್ ಗಾಂಧಿ ವಿರುದ್ಧ ವಿವೇಕಾನಂದ ಡಬ್ಬಿ ತೀವ್ರ ವಾಗ್ದಾಳಿ

    ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಪದೇ ಪದೇ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಇನ್ನೊಮ್ಮೆ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಪದ ಬಳಸಿದರೆ ಸಹಿಸುವುದಿಲ್ಲ; ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಪ್ರಧಾನಿ ನರೇಂದ್ರ ಮೋದಿ ಹಿಂದುಳಿದ ಸಮುದಾಯಕ್ಕೆ ಸೇರಿದವರೇ ಅಲ್ಲ ಎನ್ನುವ ಮೂಲಕ ರಾಹುಲ್ ಗಾಂಧಿ ಇಡೀ ಹಿಂದುಳಿದ ವರ್ಗದ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. 1999ರಲ್ಲಿ ತೇಲಿ ಸಮುದಾಯವನ್ನು ಹಿಂದುಳಿದ ವರ್ಗದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ತೇಲಿ ಸಮುದಾಯವೆಂದರೆ ಕರ್ನಾಟಕದಲ್ಲಿ ಗಾಣಿಗ ಸಮುದಾಯಕ್ಕೆ ಸೇರಿದ ಪದ. ಈ ಸಮುದಾಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಕಿಡಿಕಾರಿದರು.

    ಗ್ರಾಮ ಪಂಚಾಯಿತಿ ಸದಸ್ಯನಾಗಲೂ ಅರ್ಹನಲ್ಲದ ರಾಹುಲ್ ಗಾಂಧಿ ಈ ದೇಶದ ಅಪ್ರತಿಮ ನಾಯಕನಿಗೆ ಇಲ್ಲಸಲ್ಲದ ಮಾತನಾಡುವುದು ಸರಿಯಲ್ಲ. ಈ ಹಿಂದೆ ಪಣುತಿ ಎಂದು ಟೀಕಿಸಿದ್ದರು. ಇಂಥ ವರ್ತನೆ ಕಾರಣಕ್ಕಾಗಿಯೇ ದೇಶದ ಜನ ನಿಮ್ಮನ್ನು ತಿರಸ್ಕರಿಸುತ್ತಿದ್ದಾರೆ. ಈ ಬಾರಿಯೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ 400 ಕ್ಕೂ ಅಧಿಕ ಸ್ಥಾನ ಎನ್‌ಡಿಎಗೆ ಸಿಗಲಿದೆ ಎಂದಿದ್ದಾರೆ. ಇದನ್ನು ಅರಗಿಸಿಕೊಳ್ಳಲಾಗದ ರಾಹುಲ್ ಗಾಂಧಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದಾರೆ. ರಾಹುಲ್ ಗಾಂಧಿ ವರ್ತನೆಯಿಂದ ಬೇಸತ್ತ ಅನೇಕ ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಆದರೂ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹಗಲು ಗನಸು ಕಾಣುತ್ತಿದ್ದೀರಿ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

    ಹಿಂದುಳಿದ ವರ್ಗಕ್ಕೆ ಪ್ರಧಾನಿ ಮೋದಿ ಅವರು ಕೊಟ್ಟಷ್ಟು ಪ್ರಾಮುಖ್ಯತೆ ಬೇರೆ ಯಾರೂ ಕೊಟ್ಟಿಲ್ಲ. ಹೀಗಾಗಿ ಇಡೀ ಹಿಂದುಳಿದ ವರ್ಗ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇದೆ. ಇನ್ಮುಂದೆ ಯಾವುದೇ ಕಾರಣಕ್ಕೂ ಪ್ರಧಾನಿ ಮೋದಿ ಅವರನ್ನಾಗಲಿ, ಹಿಂದುಳಿದ ವರ್ಗವನ್ನಾಗಲಿ ಟೀಕಿಸಿದರೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ ಎಂದರು.

    ಮುಖಂಡರಾದ ಚಂದ್ರಶೇಖರ ಕವಟಗಿ ಹಾಗೂ ವಿಜಯಕುಮಾರ ಜೋಷಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts