More

    ಬೆಳೆಗಳಿಗೆ ವಿಮೆ ರಕ್ಷಣೆ ಒದಗಿಸಿ

    ಬೆಳಗಾವಿ: ರೈತರು ಬೆಳೆ ವಿಮೆ ಯೋಜನೆಯಲ್ಲಿ ಪಾಲ್ಗೊಂಡು ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೆಳೆ ವಿಮೆ ಮಾಹಿತಿಯ ಹಸ್ತ ಪತ್ರಿಕೆ ಬಿಡುಗಡೆಗೊಳಿಸಿ ನಂತರ ಬೆಳೆ ವಿಮೆ ಕಂಪನಿಯ ವಿಮೆ ಪ್ರಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

    ವಿಮೆ ಕಂಪನಿಯ ಪ್ರತಿನಿಧಿಗಳು ಜಿಲ್ಲೆೆಯ ಎಲ್ಲ ತಾಲೂಕಿನಲ್ಲಿ ತಮ್ಮ ಸಿಬ್ಬಂದಿ ನಿಯೋಜಿಸಿ ವ್ಯಾಪಕ ಪ್ರಚಾರ ಕೈಗೊಂಡಿದ್ದಾರೆ. ಗರಿಷ್ಠ ಪ್ರಮಾಣದ ರೈತರು ಸದರಿ ಯೋಜನೆಯಡಿ ಪಾಲ್ಗೊಳ್ಳಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ವಿವಿಧ ಮಾಧ್ಯಮಗಳ ಮೂಲಕ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಈ ಯೋಜನೆ ವ್ಯಾಪಕ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಜಿಲ್ಲೆಯಲ್ಲಿ 2019ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಪ್ರವಾಹ/ಅತಿವೃಷ್ಟಿಯಿಂದ ಅಧಿಸೂಚಿತ ಮುಂಗಾರು ಬೆಳೆಗಳಿಗೆ ಹಾನಿ ಉಂಟಾಗಿರುವುದರಿಂದ ಬೆಳೆ ವಿಮೆ ಮಾಡಿಸಿದ 11,671 ರೈತರಿಗೆ 565.92 ಲಕ್ಷ ರೂ. ಮಧ್ಯಂತರ ವಿಮೆ ಪರಿಹಾರ ಮಂಜೂರಾಗಿದೆ ಎಂದರು. ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

    ಪ್ರಸಕ್ತ ಸಾಲಿನಿಂದ ಈ ಯೋಜನೆಯು ಐಚ್ಛಿಕವಾಗಿದ್ದು, ಬೆಳೆ ಸಾಲ ಪಡೆದ ರೈತರಿಗೆ ಸದರಿ ಯೋಜನೆಯಿಂದ ಹೊರಗುಳಿಯುವ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಮಾಹಿತಿಗಾಗಿ ವಿಮಾ ಸಂಸ್ಥೆಯ ಪ್ರತಿನಿಧಿಗಳ ಮೊ. ಸಂ: 9152007672, 7204868840 ಸಂಪರ್ಕಿಸಬಹುದು ಎಂದು ತಿಳಿಸಿದರು. ಕಚೇರಿ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts