25.1 C
Bangalore
Friday, December 6, 2019

ಬೆಳಗಾವಿ: ಬೆಳೆ ಸಾಲ ವಸೂಲಾತಿ ನಿಲ್ಲಿಸಿ

Latest News

ವಿದ್ಯಾರ್ಥಿಗಳು ಸಮಾಜಮುಖಿ ಜೀವನ ನಡೆಸಿ

ಹುನಗುಂದ: ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸ್ವಾಸ್ಥೃ ಸಮಾಜ ಪರಿಕಲ್ಪನೆಯೊಂದಿಗೆ ಸಮಾಜಮುಖಿ ಜೀವನ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಮನ್ವಯಾಧಿಕಾರಿ ಗುರುರಾಜ್...

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಬೆಳಗಾವಿ: ರಾಷ್ಟ್ರೀಕೃತ,ಖಾಸಗಿ ಹಾಗೂ ಸಹಕಾರಿ ಬ್ಯಾಂಕ್‌ಗಳು ಸಾಲ ವಿತರಣೆಗೆ ಸಂಬಂಸಿದ ದಾಖಲಾತಿಗಳನ್ನು(ಲೋನ್ ಡಾಕ್ಯುಮೆಂಟ್) ಕಡ್ಡಾಯವಾಗಿ ಕನ್ನಡದಲ್ಲಿ ನೀಡಬೇಕು. ಜತೆಗೆ ವಿವಿಧ ಬ್ಯಾಂಕ್‌ಗಳಲ್ಲಿನ ರೈತರ ಬೆಳೆಸಾಲ ವಸೂಲಾತಿ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂತ್ರಸ್ತರ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರು, ಸಾರ್ವಜನಿಕರಿಗೆ ವಿವಿಧ ಉದ್ದೇಶಕ್ಕಾಗಿ ನೀಡುವ ಸಾಲ ವಿತರಣೆ ದಾಖಲೆಗಳು ಕನ್ನಡದಲ್ಲಿಯೇ ಇರಬೇಕು. ಕನ್ನಡ ಹೊರತು ಪಡಿಸಿ ಬೇರೆ ಭಾಷೆಯಲ್ಲಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಯಾಂಕ್‌ಗಳಿಗೆ ಎಚ್ಚರಿಕೆ ನೀಡಿದರು.
ಬೆಳೆ ಸಾಲ ವಿತರಣೆ ಪ್ರಕರಣ ನ್ಯಾಯಾಲಯ ಮೆಟ್ಟಿಲೇರಿದ್ದರೆ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವುಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಎಲ್ಲ ಬ್ಯಾಂಕ್‌ಗಳು ವಕೀಲರ ನೆರವಿನಿಂದ ನ್ಯಾಯಾ ಲಯಕ್ಕೆ ಮನವಿ ಮಾಡಿಕೊಳ್ಳಬೇಕು. ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳು ಕೂಡ ಜನರ ಪರಿಸ್ಥಿತಿ ಅರಿತುಕೊಂಡು ಕೆಲಸ ಮಾಡಬೇಕು. ಸಾಲಮನ್ನಾ ಅರ್ಹತೆ ಹೊಂದಿರುವ ರೈತರ ವಿರುದ್ಧದ ಪ್ರಕರಣಗಳನ್ನು ಸ್ಥಗಿತಗೊಳಿಸಲು ತಕ್ಷಣ ಕ್ರಮ ವಹಿಸಬೇಕು. ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ಯಾವುದೇ ರೀತಿಯ ಪಿಂಚಣಿಯನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಸೂಚನೆ ನೀಡಿದರು.

ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳು ಬೆಳೆಸಾಲ ವಸೂಲಾತಿಗಾಗಿ ನ್ಯಾಯಾಲಯಗಳ ಮೂಲಕ ಬ್ಯಾಂಕ್‌ಗಳು ನೋಟಿಸ್ ಅಥವಾ ಪೊಲೀಸ್ ವಾರೆಂಟ್ ಬಂದರೆ ಗಾಬರಿಯಾಗಬೇಡಿ. ಜಿಲ್ಲಾಡಳಿತದ ಗಮನಕ್ಕೆ ತಂದರೆ ತಕ್ಷಣವೇ ಸೂಕ್ತ ಕಾನೂನು ಮೂಲಕ ನೆರವು ನೀಡಲಾಗುವುದು. ಈಗಾಗಲೇ ಎಲ್ಲ ಬ್ಯಾಂಕ್‌ಗಳಿಗೆ ನೋಟಿಸ್ ನೀಡದಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ನೋಟಿಸ್ ನೀಡಿದರೆ ಅಂತಹ ಬ್ಯಾಂಕ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಡಿಸಿ ಭರವಸೆ ನೀಡಿದರು.

ವಿವಿಧ ರೈತ ಸಂಘಟನಗಳ ಮುಖಂಡರು ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ನೀಡುವ ಪ್ರಕ್ರಿಯೆಯಲ್ಲಿ ವಿಳಂಬ ಆಗುತ್ತಿರುವುದರಿಂದ ರೈತರು ಅನಿವಾರ್ಯವಾಗಿ ಖಾಸಗಿ ಬ್ಯಾಂಕುಗಳ ಮೊರೆ ಹೋಗುತ್ತಿದ್ದಾರೆ. ಈ ಬ್ಯಾಂಕ್‌ಗಳಲ್ಲಿನ ಸಿಬ್ಬಂದಿಗೆ ಕನ್ನಡ ಮಾತನಾಡಲು ಬರುವುದಿಲ್ಲ. ಜತೆಗೆ ಸಾಲದ ದಾಖಲಾತಿಗಳು ಇಂಗ್ಲೀಷ್, ಹಿಂದಿಯಲ್ಲಿರುವುದರಿಂದ ರೈತರು ಮೋಸ ಹೋಗುತ್ತಿದ್ದಾರೆ. ಬ್ಯಾಂಕುಗಳು ಹಾಗೂ ಸರ್ಕಾರದಿಂದ ನೀಡಲಾಗುವ ಬೆಳೆಸಾಲವನ್ನು ಬೆಳೆಸಾಲ ಎಂದು ಕರೆಯದೇ ಬೆಳೆ ಸಹಾಯಧನ ಎಂದು ಪರಿಗಣಿಸಬೇಕು ಎಂದು ವಿನಂತಿಸಿದರು.

ಬ್ಯಾಂಕ್ ಸಿಬ್ಬಂದಿ ಮನೆ ಮನೆಗೆ ಬಂದು ಸಾಲ ನೀಡುತ್ತಾರೆ. ಬಳಿಕ ಗೂಂಡಾಗಳ ಮೂಲಕ ಸಾಲ ವಸೂಲಾತಿ ಮಾಡುತ್ತಾರೆ. ರಾತ್ರಿ 11ಗಂಟೆಯವರೆಗೆ ಸಾಲ ವಸೂಲಿ ಹೆಸರಿನಲ್ಲಿ ಮಹಿಳೆಯರಿಗೆ ಕಿರುಕುಳ ಕೊಡುತ್ತಿದ್ದಾರೆ. ಇಂತಹ ಕೆಲಸಕ್ಕೆ ಜಿಲ್ಲಾಡಳಿತ ಕಡಿವಾಣ ಹಾಕಬೇಕು. ಜತೆಗೆ ಸಾಲ ವಸೂಲಾತಿ ಏಜೆನ್ಸಿಗಳ ಪೂರ್ವಾಪರ ಪರಿಶೀಲಿಸಿ ಅವರನ್ನು ನೇಮಕ ಮಾಡಿಕೊಳ್ಳಬೇಕು. ಸಾಲವಸೂಲಾತಿ ನೆಪದಲ್ಲಿ ಗೂಂಡಾವರ್ತನೆ ಅಥವಾ ದೌರ್ಜನ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದರು.

ಜಿಲ್ಲಾ ಅಗ್ರಣಿ ಬ್ಯಾಂಕ್ ವ್ಯವಸ್ಥಾಪಕ ಅರುಣ್, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್‌ಕುಮಾರ್, ಎಸ್‌ಪಿ ಲಕ್ಷ್ಮಣ ನಿಂಬರಗಿ,ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಪ್ರಾದೇಶಿಕ ಸಾರಿಗೆ ಅಕಾರಿ ಶಿವಾನಂದ ಮಗದುಮ್ಮ , ಬ್ಯಾಂಕ್ ಅಕಾರಿಗಳು, ರೈತರು ಇದ್ದರು.

ಸಾಲಕ್ಕೆ ಖಾಲಿ ಚೆಕ್ ಪಡೆದರೆ ಕ್ರಮ

ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳು ಜನರಿಗೆ ಸಾಲ ನೀಡುವ ಸಂದರ್ಭದಲ್ಲಿ ಖಾಲಿ ಚೆಕ್‌ಗಳನ್ನು ಪಡೆದುಕೊಳ್ಳಬೇಕು ಎಂಬ ನಿಯಮ ಆರ್‌ಬಿಐ ಹೊರಡಿಸಿಲ್ಲ. ಮುಂದಿನ ದಿನಾಂಕಗಳನ್ನು ನಮೂದಿಸಿ ಖಾಲಿ ಚೆಕ್‌ಗಳನ್ನು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಒಂದು ವೇಳೆ ಯಾರಾದರೂ ನಿಯಮ ಉಲ್ಲಂಸಿ ಖಾಲಿ ಚೆಕ್ ಪಡೆದುಕೊಂಡರೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದರು.

ಕ್ರಿಮಿನಲ್ ಕೇಸ್

ನೆರೆ ಸಂತ್ರಸ್ತರು ಎಲ್ಲ ಕಳೆದುಕೊಂಡು ಪರಿಹಾರ ಕೇಂದ್ರಗಳಲ್ಲಿ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಮೈಕ್ರೋ ೈನಾನ್ಸ್‌ನವರು ಸಾಲ ವಸೂಲಾತಿಗಾಗಿ ಪರಿಹಾರ ಕೇಂದ್ರಕ್ಕೆ ಹೋದರೆ ಅಂತಹ ಪೈನಾನ್ಸ್ ಪರವಾನಗಿ ರದ್ದು ಪಡಿಸಲಾಗುವುದು. ಜತೆಗೆ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಸಾಲ ವಸೂಲಾತಿಗೆ ದೌರ್ಜನ್ಯ, ಬೆದರಿಕೆ ಹಾಕುವ ಕುರಿತು ಫೈನಾನ್ಸ್ ವಿರುದ್ಧ ಜನರು ದೂರು ಸಲ್ಲಿಸಿದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...