More

    ಬೆಳೆ ನಷ್ಟ ಪರಿಹಾರಕ್ಕೆ ಪಟ್ಟು: ರೈತಸಂಘ ಕಾರ್ಯಕರ್ತರ ಪ್ರತಿಭಟನೆ

    ಚಳ್ಳಕೆರೆ: ಅತಿವೃಷ್ಟಿಯಿಂದಾಗಿ ತಾಲೂಕಿನಲ್ಲಿ ಸಾವಿರಾರು ಎಕರೆ ಬೆಳೆ ಹಾಳಾಗಿದ್ದು, ನಷ್ಟ ಪರಿಹಾರ ವಿತರಣೆ ಸರಿಯಾಗಿ ಆಗುತ್ತಿಲ್ಲ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಬುಧವಾರ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

    ಮುಂಗಾರಿನ ಶೇಂಗಾ, ತೊಗರಿ ಹಾಗೂ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಷ್ಟವಾಗಿವೆ. 1 ಲಕ್ಷ ಹೆಕ್ಟೆರ್ ಬೆಳೆ ನಷ್ಟವಾಗಿದ್ದು, ಕೃಷಿಕರು ಸಾಲದ ಸುಳಿಗೆ ಸಿಲುಕಿದ್ದಾರೆ ಎಂದು ಅಳಲು ತೋಡಿಕೊಂಡರು.

    ಎರಡು ವರ್ಷದಿಂದ ಬೆಳೆ ವಿಮೆ ಮತ್ತು ಪರಿಹಾರ ರೈತರಿಗೆ ಸಿಗುತ್ತಿಲ್ಲ. ಹೆಚ್ಚುವರಿ ಘೋಷಣೆ ಮಾಡಿರುವ ಬೆಳೆ ಪರಿಹಾರ ಸೇರಿ ಬೆಳೆವಿಮೆ ಸಂಕ್ರಾಂತಿ ಒಳಗೆ ನೀಡದಿದ್ದರೆ ತಾಲೂಕು, ಜಿಲ್ಲಾಧಿಕಾರಿ ಕಚೇರಿಗೆ ಮತ್ತಿಗೆ, ರಸ್ತೆ ತಡೆ ಹೀಗೆ ವಿವಿಧ ಹಂತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಎನ್.ರಘುಮೂರ್ತಿ, ತಾಲೂಕಿನಲ್ಲಿ 43 ಸಾವಿರ ಹೆಕ್ಟೆರ್ ಬೆಳೆ ನಷ್ಟಕ್ಕೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿತ್ತು. ಸರ್ಕಾರ ಹೆಚ್ಚುವರಿಯಾಗಿ ಬೆಳೆ ನಷ್ಟದ ಪರಿಹಾರವನ್ನು ಎರಡು ಪಟ್ಟು ವಿತರಿಸಲು ಆದೇಶಿಸಿದೆ. ಇದರಂತೆ ರೈತರ ಬ್ಯಾಂಕ್ ಖಾತೆ ಮಾಹಿತಿ ಸಂಗ್ರಹಿಸಿ, ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts