ಬೆಳೆ ನಷ್ಟ ಸರ್ವೆ ಮಾಡಿ, ಪರಿಹಾರ ಕೊಡಿ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಒತ್ತಾಯ

HDK 18 Feb 20
Published on

ಬೆಂಗಳೂರು: ರೈತರ ಸಂಕಷ್ಟ ಪರಿಹರಿಸಲು ಪ್ರತಿ ಗ್ರಾಮಗಳಲ್ಲಿ ಬೆಳೆಗಳ ಸಮೀಕ್ಷೆ ಮಾಡಿ ಮೂರು ದಿನದಲ್ಲಿ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್​ಡೌನ್ ಮೂರನೇ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆ ಮಾರಾಟವಾಗದೆ ಜಮೀನಿನಲ್ಲೇ ಕೊಳೆಯುತ್ತಿರುವುದನ್ನು ಕಂಡು ರೈತರು ಸಂಕಟ ಪಡುತ್ತಿದ್ದಾರೆ. ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಸರ್ಕಾರ ಇನ್ನೂ ಕ್ರಿಯಾಶೀಲವಾಗಿಲ್ಲ. ಮುಂಗಾರು ಬೆಳೆಗೆ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಕೊರತೆಯಾಗದಂತೆ ಎಚ್ಚರ ವಹಿಸುತ್ತಿರುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ.

ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು. ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net